ಕರಾವಳಿ

ಕಂಬಳ ನಿಷೇಧ ಹಿಂತೆಗೆತಕ್ಕೆ ರಾಜ್ಯ ಸರ್ಕಾರ ಯತ್ನಿಸಲಿ : ಸಂಸದ ನಳಿನ್‌ಕುಮಾರ್ ಕಟೀಲ್

Pinterest LinkedIn Tumblr

ಮಂಗಳೂರು,ಜನವರಿ.23 : ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಗೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಕಂಬಳದ ಮೇಲಿನ ನಿಷೇಧ ಹಿಂತೆಗೆತಕ್ಕೆ ಸಂಘಟಿತ ಪ್ರಯತ್ನ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸಚಿವರು ಕೇಂದ್ರ ಸರ್ಕಾರಕ್ಕೆ ಪ್ರಬಲ ಬೇಡಿಕೆ ಸಲ್ಲಿಸಬೇಕು ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.

ಪ್ರಾಣಿ ಹಿಂಸೆ ನೆಪದಲ್ಲಿ ತುಳುನಾಡಿನ ಹೆಮ್ಮೆಯ ಕ್ರೀಡೆಯಾದ ಕಂಬಳವನ್ನು ನಿಷೇಧಿಸಲಾಗಿದೆ. ನಮ್ಮ ಸಂಸ್ಕೃತಿ,ಪರಂಪರೆಯ ಪ್ರತೀಕವಾದ ಕಂಬಳದ ಉಳಿವಿಗೆ ಈಗಾಗಲೇ ಕರಾವಳಿಯಲ್ಲಿ ಹೋರಾಟಗಳು ನಡೆದಿವೆ.

ಸಂಸದನ ನೆಲೆಯಲ್ಲಿ ಕೇಂದ್ರ ಕಾನೂನು ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದೇನೆ. ಇದೀಗ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ಕಲ್ಪಿಸಿರುವ ಕಂಬಳಕ್ಕೂ ಕಾನೂನು ರೀತಿಯ ಅವಕಾಶ ದೊರೆಯಬಹುದಾಗಿದೆ. ರಾಜ್ಯ ಸರ್ಕಾರದ ಮೂಲಕ ತಕ್ಷಣ ಕೇಂದ್ರಕ್ಕೆ ಮನವಿ ಸಲ್ಲಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಸಂಸದರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.