ಕರಾವಳಿ

ಫಲಿತಾಂಶ ಪ್ರಕಟಿಸುವಲ್ಲಿ ನಿರ್ಲಕ್ಷ್ಯ ಆರೋಪ : ಎಬಿವಿಪಿ ಕಾರ್ಯಕರ್ತರಿಂದ ಉಪಕುಲಪತಿಗೆ ಮುತ್ತಿಗೆ

Pinterest LinkedIn Tumblr

ಮಂಗಳೂರು, ಫೆಬ್ರವರಿ.2 : ಮಂಗಳೂರಿನ ಹಂಪನಕಟ್ಟೆಯ ಸರ್ಕಾರಿ ಭವನದಲ್ಲಿ ನಡೆಯುತ್ತಿದ್ದ ವಿಚಾರ ಸಂಕೀರ್ಣದಲ್ಲಿ ಪಾಲ್ಗೊಂಡು ತೆರಳುತ್ತಿದ್ದ ಉಪಕುಲಪತಿ ಪ್ರೋ.ಬೈರಪ್ಪ ರವರಿಗೆ ಎವಿಬಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಬುಧವಾರ ನಡೆದಿದೆ.

ಪದವಿ ಪರೀಕ್ಷೆಯ ‌ಫಲಿತಾಂಶ ಪ್ರಕಟಿಸುವಲ್ಲಿ ವಿವಿಯ ನಿರ್ಲಕ್ಷ್ಯ ವಹಿಸಿಸುತ್ತಿದೆ ಎಂದು ಆರೋಪಿಸಿರುವ ಎಬಿವಿಪಿ ಕಾರ್ಯಕರ್ತರು ಉಪಕುಲಪತಿ ಪ್ರೋ.ಬೈರಪ್ಪ ರವರಿಗೆ ಮುತ್ತಿಗೆ ಹಾಕಿದರು. ಇದೇ ಸಂದರ್ಭದಲ್ಲಿ ಫಲಿತಾಂಶ ಪ್ರಕಟಿಸುವಲ್ಲಿ ನಿರ್ಲಕ್ಷ್ಯ ಮಾಡಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ಪರೀಕ್ಷಾಂಗ ಕುಲಸಚಿವರ ರಾಜೀನಾಮೆಗೆ ಪಟ್ಟು ಹಿಡಿದರು.

ಈ ಸಂದರ್ಭ ಕಾರ್ಯಕರ್ತರ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಉಪ ಕುಲಪತಿ ಪ್ರೋ ಕೆ.ಬೈರಪ್ಪ ಅವರು, ರಾಜ್ಯ ಸರ್ಕಾರದ ಗಮನಕ್ಕೆ ತಂದು ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾತ್ಕಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

Comments are closed.