ಮಂಗಳೂರು.ಫೆಬ್ರವರಿ.2: ಕೆ.ಯು.ಐ.ಡಿ.ಎಫ್.ಸಿ,ಕರ್ನಾಟಕ ಸರಕಾರ,ವಿಶ್ವ ಬ್ಯಾಂಕ್ ಸಹಯೋಗದೊಂದಿಗೆ ಮಂಗಳೂರು ಮಹಾನಗರ ಪಾಲಿಕೆಯು ಫೆ.3 ಮತ್ತು 4ರಂದು ಎರಡು ದಿನಗಳ ಸ್ಮಾರ್ಟ್ ಸಿಟಿಯ ರಾಜ್ಯ ಮಟ್ಟದ ಕಾರ್ಯಗಾರವನ್ನು ಹಮ್ಮಿಕೊಂಡಿದೆ ಎಂದು ಮಂಗಳೂರು ಮೇಯರ್ ಹರಿನಾಥ್ ತಿಳಿಸಿದರು.
ಗುರುವಾರ ತಮ್ಮ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಾಗಾರವನ್ನು ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ,ಜಿಲ್ಲೆಯ ಶಾಸಕರು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಸೇರಿದಂತೆ ಈ ಕಾರ್ಯಾಗಾರದಲ್ಲಿ ಮಂಗಳೂರು,ಹುಬ್ಬಳ್ಳಿ,ಧಾರವಾಡ, ದಾವಣಗೆರೆ,,ಶಿವಮೊಗ್ಗ,ತುಮಕೂರು ಸೇರಿದಂತೆ 6 ಮಹಾನಗರ ಪಾಲಿಕೆಯ ಅಧಿಕಾರಿಗಳಲ್ಲದೆ ವಿಶ್ವ ಬ್ಯಾಂಕ್ ಕ್ಷೇತ್ರ ಪರಿಣಿತರು,ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಮನಪಾ ಆಯುಕ್ತ ಮುಹಮ್ಮದ್ ನಝೀರ್,ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ,ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಲ್ಯಾನ್ಸಿ ಲೋಟ್ ಪಿಂಟೊ, ಕವಿತಾ ಸನಿಲ್, ಅಪ್ಪಿಲತಾ, ಮನಪಾ ಜಂಟಿ ಆಯುಕ್ತ ಗೋಕುಲ್ ದಾಸ್ ನಾಯಕ್ ಮುಂತಾದವರು ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Comments are closed.