ಕರಾವಳಿ

​​ಸ್ಮಾರ್ಟ್ ಸಿಟಿ ಯೋಜನೆ ಮೂಲಕ ನಗರಗಳ ಅಭಿವೃದ್ದಿ ಸಾಧ್ಯ: ‘ಸ್ಮಾರ್ಟ್ ಸಿಟಿ’ ರಾಜ್ಯಮಟ್ಟದ ಕಾರ್ಯಗಾರ ಉದ್ಘಾಟಿಸಿ ಸಚಿವ ರೋಶನ್ ಬೇಗ್

Pinterest LinkedIn Tumblr

ಮಂಗಳೂರು,ಫೆಬ್ರವರಿ.3: ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಯುಐಡಿಎಫ್ಸಿ ಮತ್ತು ವಿಶ್ವಬ್ಯಾಂಕ್ ಸಹಯೋಗ ದೊಂದಿಗೆ  ‘ಸ್ಮಾರ್ಟ್ ಸಿಟಿ’ ಕುರಿತು ಶುಕ್ರವಾರ ನಗರದ ಖಾಸಗಿ ಹೊಟೇಲ್ ನಲ್ಲಿ ರಾಜ್ಯಮಟ್ಟದ ಕಾರ್ಯಗಾರ ನಡೆಯಿತು.

ಕಾರ್ಯಗಾರವನ್ನು ರಾಜ್ಯ ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಮುಖ ನಗರಗಳ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಯೋಜನೆಯ ಅಗತ್ಯವಿದೆ. ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸುಧಾರಣೆ ಇದರ ಮುಖ್ಯ ಉದ್ದೇಶವಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನವಲ್ಲದೆ ಸಾರ್ವಜನಿಕರ ಉದ್ದಿಮೆಗಳ ಸಹಭಾಗಿತ್ವದ ಮೂಲಕ ನಗರಗಳ ಅಭಿವೃದ್ಧಿಯಾಗಬೇಕಾಗಿದೆ. ಶುದ್ಧ ಕುಡಿಯುವ ನೀರು ಮತ್ತು ಶೌಚಾಲಯ ನಿರ್ಮಾಣ ಹಾಗು ತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಹೇಳಿದರು.

ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ತುಮಕೂರು ಮಹಾನಗರ ಪಾಲಿಕೆಯ ಅಧಿಕಾರಿಗಳಲ್ಲದೆ ವಿಶ್ವ ಬ್ಯಾಂಕ್ ಕ್ಷೇತ್ರ ಪರಿಣಿತರು,ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಕೆಯುಐಡಿಎಫ್ಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್, ಜಿಲ್ಲಾಧಿಕಾರಿ ಡಾ.ಜಗದೀಶ್, ಶಾಸಕ ಜೆ.ಆರ್.ಲೋಬೊ, ಮನಪಾ ಮೇಯರ್ ಹರಿನಾಥ್, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಜಂಟಿ ಆಯುಕ್ತ ಗೋಕುಲ ದಾಸ್ನಾಯಕ್ ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಸನಿಲ್, ಅಪ್ಪಿ, ಲ್ಯಾನ್ಸಿ ಲಾಟ್ ಪಿಂಟೊ ಮುಂತಾದವರು ಉಪಸ್ಥಿತರಿದ್ದರು.

Comments are closed.