ಕರಾವಳಿ

ದಡಾರ, ರುಬೆಲ್ಲಾ ಲಸಿಕೆ ಹಾಕುವ ಅಭಿಯಾನಕ್ಕೆ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರಿಂದ ಚಾಲನೆ

Pinterest LinkedIn Tumblr

ಮಂಗಳೂರು.ಫೆಬ್ರವರಿ.7:ದಡಾರ-ರುಬೆಲ್ಲಾ ಅಭಿಯಾನ ಕಾರ್ಯಕ್ರಮಕ್ಕೆ ಇಂದು ಬೆಳಿಗ್ಗೆ ಬೆಂದೂರ್‍ವೆಲ್ ಜಂಕ್ಷನ್ ಬಳಿಯಿರುವ ( ಎಸ್‍ಸಿಎಸ್ ಆಸ್ಪತ್ರೆ ಸಮೀಪ) ಸೈಂಟ್ ತೆರೆಸಾ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಲಾಯಿತು.

ದ.ಕ. ಜಿಲ್ಲಾಡಳಿತದ ವತಿಯಿಂದ ಜಿಲ್ಲಾದ್ಯಂತ 9 ತಿಂಗಳಿನಿಂದ 15 ವರ್ಷದೊಳಗಿನ ಮಕ್ಕಳಿಗೆ ದಡಾರ, ರುಬೆಲ್ಲಾ ಲಸಿಕೆ ಹಾಕುವ ಮೂರುವಾರಗಳ ಅಭಿಯಾನಕ್ಕೆ ನಗರದ ಸೈಂಟ್ ಥೆರೆಸಾ ಶಾಲೆಯಲ್ಲಿ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಇಂದು ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಕ್ಕಳ ಆರೋಗ್ಯಕ್ಕೆ ಈ ಲಸಿಕೆ ಹಾಕಲಾಗುತ್ತಿದ್ದು, ಎಲ್ಲ ಪೋಷಕರು ಸಹಕಾರ ನೀಡಬೇಕು. ಲಸಿಕೆಯ ಬಗೆಗಿನ ವದಂತಿಗಳಿಗೆ ಕಿವಿಗೊಡಬೇಡಿ ಎಂದರು.

ಈ ಕಾರ್ಯಕ್ರಮ ಜಿಲ್ಲೆಯ ಎಲ್ಲ ಖಾಸಗಿ, ಅನುದಾನಿತ, ಸರ್ಕಾರಿ, ಅಂಗನವಾಡಿ ಕೇಂದ್ರಗಳಲ್ಲಿ ಮುಂದಿನ ಮೂರು ವಾರಗಳ ಕಾಲ ನಡೆಯಲಿದೆ. ಮೊದಲ ವಾರದಲ್ಲೇ ಶೇ.60-70ರಷ್ಟು ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಡಾ.ಅಶೋಕ್ ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ರಾವ್, ಜಿ.ಪಂ. ಸದಸ್ಯ ವಿನೋದ್ ಬೆಳ್ಳೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸುಂದರ ಪೂಜಾರಿ, ಆರೋಗ್ಯ ಇಲಾಖೆಯ ಸತೀಶ್ಚಂದ್ರ, ವೀಕ್ಷಕ ಡಾ. ಸುಧೀರ್, ಜಿಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಕಿ ಶ್ರೀಮತಿ ಪ್ರಜ್ಞಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲೆಯ ಆವರಣದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ಹಾಕಲಾಯಿತು.

Comments are closed.