
ಮಂಗಳೂರು.ಫೆಬ್ರವರಿ.10: ಅಂಬೇಡ್ಕರ್ ಅವರ ನೆನಪಿನ ಅಂಗವಾಗಿ ವಾರ್ತಾ ಮತ್ತು ಪ್ರಚಾರ ಇಲಾಖೆಯ ವತಿಯಿಂದ ರಾಜ್ಯದ ಕಲಾವಿದರ ತಂಡದಿಂದ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಲಾದ ಭಾರತ ಭಾಗ್ಯ ವಿಧಾತ ಧ್ವನಿ ಬೆಳಕಿನ ಕಾರ್ಯಕ್ರಮ ಗುರುವಾರ ಸಂಜೆ ಬಹಳ ವೈವಿಧ್ಯಮಯವಗಿ ನಡೆಯಿತು.

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಹರಿನಾಥ್ ಅವರು ಡೋಲು ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅಂಬೇಡ್ಕರ್ ಅವರ ಬದುಕು ಭಾರತದ ಜನತೆಯ ಬದುಕಿಗೆ ಹೇಗೆ ಬೆಳಕಾಗಿದೆ ಎನ್ನವುದನ್ನು ಕಲಾವಿದರು ಹಾಡು ರೂಪಕ ದೃಶ್ಯ ಮಾಧ್ಯಮದ ಮೂಲಕ ಜನರ ಮುಂದಿಟ್ಟರು.

ಮೂಡಾ ಅಧ್ಯಕ್ಷ ಸುರೇಶ್ ಬಲ್ಲಾಳ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್.ರವಿ,ಜಿಲ್ಲಾ ಪಂಚಾಯತ್ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್,ಮನಪಾ ಆಯುಕ್ತ ಮುಹಮ್ಮದ್ ನಝೀರ್,ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಕಾಂತರಾಜು,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಸ್ವಾಗತಿಸಿದರು.
Comments are closed.