ಕರಾವಳಿ

ದುಬೈಯಿಂದ ಬಂದ ವಿಮಾನಯಾನಿಗಳ ಬಳಿ 20 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಚಿನ್ನದ ಪ್ಲೆಟ್ಸ್ ಪತ್ತೆ

Pinterest LinkedIn Tumblr

ಮಂಗಳೂರು, ಫೆಬ್ರವರಿ.10: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ರಾನ್ಸ್ ಫಾರ್ಮರ್ ನಲ್ಲಿ ಅಡಗಿಸಿ ಅಕ್ರಮವಾಗಿ ಚಿನ್ನದ ಪ್ಲೆಟ್ಸ್ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುವ ಡಿಆರ್ ಐ ಅಧಿಕಾರಿಗಳು 20 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಕಾಸರಗೋಡು ಮೂಲದ ಹ್ಯಾರಿಸ್ ಪನಲಮ್ ಮಹಮ್ಮದ್ ಕುಂಞ ಹಾಗೂ ಫೈಸಲ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 20 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ದುಬೈಯಿಂದ ವಿಮಾನ ಮೂಲಕ ಮಂಗಳೂರಿಗೆ ಆಗಮಿಸಿದ್ದ ವೇಳೆ ನಿಲ್ದಾಣದಲ್ಲಿ ಅವರ ವರ್ತನೆಯಿಂದ ಅನುಮಾನಗೊಂಡ ಡಿಆರ್ ಐ ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಿಂದ ಹಿಂಬಾಲಿಸಿ ಮಂಗಳೂರಿನ ಪಂಪ್ ವೆಲ್ ವೃತ್ತದ ಬಳಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅವರ ಬಳಿ ಇರುವ ಅಕ್ರಮ ಚಿನ್ನದ ಪ್ಲೆಟ್ಸ್ ಪತ್ತೆಯಾಗಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.

Comments are closed.