ಕರಾವಳಿ

ಎತ್ತಿನಹೊಳೆ ಯೋಜನೆ ವಿರೋಧಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದವರ ಬಂಧನ – ಆಕ್ರೋಷಿತರಿಂದ ಜಿಲ್ಲಾ ಬಂದ್‌ಗೆ ಕರೆ

Pinterest LinkedIn Tumblr

ಮಂಗಳೂರು,ಫೆಬ್ರವರಿ.10: ಎತ್ತಿನಹೊಳೆ ಯೋಜನೆ ವಿರುದ್ಧ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕೈಗೊಂಡಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಪೊಲೀಸರು ಅಡ್ಡಿಪಡಿಸಿ, ಅನಿರ್ಧಿಷ್ಟಾವಧಿ ಉಪವಾಸ ನಿರತರಾಗಿದ್ದವರನ್ನು ಬಂಧಿಸಿದ ಘಟನೆ ಶುಕ್ರವಾರ ಮಂಗಳೂರಿನಲ್ಲಿ ನಡೆದಿದ್ದು, ಇದರಿಂದ ರೊಚ್ಚಿಗೆದ್ದ ಸಮಿತಿಯು ಅನಿರ್ಧಿಷ್ಟಾವಧಿ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿದೆ.

ಕರಾವಳಿಯ ಜೀವನದಿ ಎತ್ತಿನಹೊಳೆ ಯೋಜನೆ ವಿರುದ್ಧ ಈಗಾಗಲೇ ಹಲವಾರು ಪ್ರತಿಭಟನೆಗಳು ನಡೆದಿದ್ದು, ಈ ಬಗ್ಗೆ ಸರಕಾರ ಯಾವೂದೇ ನಿರ್ಧಾರಕ್ಕೆ ಬರದ ಹಿನ್ನೆಲೆಯಲ್ಲಿ ನೇತ್ರಾವತಿ ಉಳಿವಿಗಾಗಿ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯು ಸಂಸದ ನಳಿನ್ ಕುಮಾರ್ ಅವರ ನೇತ್ರತ್ವದಲ್ಲಿ ಇಂದು ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿತ್ತು.

ಆದರೆ ಉಪವಾಸ ಸತ್ಯಾಗ್ರಹಕ್ಕೆ ಪೊಲೀಸರು ನೀಡಿದ್ದ ಅನುಮತಿ ಅವಧಿ ಮೀರಿದೆ ಎಂದು ಆರೋಪಿಸಿರುವ ಪೊಲೀಸರು ಏಕಾಏಕಿ ಸ್ಥಳಕ್ಕೆ ಆಗಮಿಸಿ ಧರಣಿ ನಿರತರನ್ನ ಬಂಧಿಸಿದ್ದಾರೆ. ಪೊಲೀಸರು ಅಮರಣಾಂತ ಉಪವಾಸ ನಿರತರನ್ನು ಬಂಧಿಸುತ್ತಿದ್ದಂತೆ ಅನಿರ್ಧಿಷ್ಟಾವಧಿ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಉಪವಾಸ ನಿರತರಾಗಿದ್ದವರು ಕರೆ ನೀಡಿದ್ದಾರೆ.

ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಗೆ ಇಂದು ಅಪರಾಹ್ನ 2 ಗಂಟೆಯವರೆಗೆ ಮಾತ್ರ ಧರಣಿ ನಡೆಸಲು ಪೊಲೀಸ್ ಇಲಾಖೆ ಅನುಮತಿ ನೀಡಿತ್ತು ಎನ್ನಲಾಗಿದೆ. ಆದರೆ ಅ ಬಳಿಕವೂ ಧರಣಿ ನಿರತರು ಸ್ಥಳ ತೆರವುಗೊಳಿಸದ ಕಾರಣ ಸಂಸದ ನಳಿನ್ ಕುಮಾರ್ ಸಹಿತ ಉಪವಾಸ ನಿರತರಾಗಿದ್ದ ಹಲವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಸಂಸದ ನಳಿನ್ ಕುಮಾರ್ ಸೇರಿದಂತೆ ಸಮಿತಿಯ ಮುಖಂಡರಾದ ಸತ್ಯರಾಜ್ ಸುರತ್ಕಲ್, ಜಿತೇಂದ್ರ ಕೊಟ್ಟಾರಿ, ಶಶಿರಾಜ್ ಶೆಟ್ಟಿ ಕೊಳಂಬೆ, ಎಂ.ಜಿ.ಹೆಗಡೆ, ಹನೀಫ್ ಖಾನ್ ಕೊಡಾಜೆ, ರಘುವೀರ್ ಸೂಟರ್ ಪೇಟೆ ಹಾಗೂ ವಿದ್ಯಾರ್ಥಿ ಮುಖಂಡ ದಿನಕರ ಶೆಟ್ಟಿ, ತುರವೇ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಮತ್ತಿತ್ತರರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

Comments are closed.