ಕರಾವಳಿ

ಸಚಿವ ರೋಶನ್ ಬೇಗ್ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ : ರಸ್ತೆ ತಡೆಗೆ ಯತ್ನಿಸಿದ ಹಲವರ ಬಂಧನ

Pinterest LinkedIn Tumblr

ಮಂಗಳೂರು, ಅಕ್ಟೊಬರ್.17: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ರೋಶನ್ ಬೇಗ್ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ಬೇಗ್ ವಿರುದ್ಧ ಬಿಜೆಪಿ ವತಿಯಿಂದ ನಗರದ ಪಿವಿಎಸ್ ವೃತ್ತದ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.

ನರೇಂದ್ರ ಮೋದಿಯವರು ಬಿಜೆಪಿಗೆ ಮಾತ್ರ ಪ್ರಧಾನಿಯಾಗಿರದೆ, ದೇಶದ ಪ್ರಧಾನಿಯಾಗಿದ್ದಾರೆ. ಅವರನ್ನು ಅವಹೇಳನಕಾರಿಯಾಗಿ ನಿಂದಿಸಿರುವುದು ಖಂಡನೀಯ ಎಂದು ಆಕ್ರೋಷ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ಪಿವಿಎಸ್ ವೃತ್ತದ ಬಳಿ ರಸ್ತೆ ರೋಕೋ ನಡೆಸಿ ಪ್ರತಿಭಟನೆ ಮಾಡಿದರು.ಈ ವೇಳೆ ರಸ್ತೆ ತಡೆ ನಡೆಸಿದ ಕೆಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಮಾಜಿ ಶಾಸಕರಾದ ಎನ್.ಯೋಗೀಶ್ ಭಟ್, ಕೆ.ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾ ಪದಾಧಿಕಾರಿಗಳಾದ ಬೃಜೇಶ್ ಚೌಟ, ಸಂಜಯ ಪ್ರಭು, ಪಾಲಿಕೆ ಸದಸ್ಯರಾದ ಗಣೇಶ್ ಹೊಸಬೆಟ್ಟು, ರೂಪಾ ಡಿ. ಬಂಗೇರ, ಸ್ಲಂ ಮೋರ್ಚಾ ಅಧ್ಯಕ್ಷ ರಾಮ ಅಮೀನ್ ಪಚ್ಚನಾಡಿ, ಪ್ರಮುಖರಾದ ನಿತಿನ್ ಕುಮಾರ್, ಶಕಿಲಾ ಕಾವಾ ಮತ್ತಿತರರು ಉಪಸ್ಥಿತರಿದ್ದರು.

Comments are closed.