ಕರಾವಳಿ

ದೀಪಾವಳಿ ಸಂಭ್ರಮಾಚರಣೆ : ಸಾರ್ವಜನಿಕರಿಗೆ ಕೆಲವೊಂದು ಸೂಚನೆ (ಎಚ್ಚರಿಕೆ)

Pinterest LinkedIn Tumblr

( ಕಡತ ಚಿತ್ರ )

ಮ0ಗಳೂರು ಅಕ್ಟೋಬರ್ 17: ಈ ವರ್ಷದ ದೀಪಾವಳಿ ಹಬ್ಬ ನಾಳೆಯಿಂದ ಆರಂಭಗೊಳ್ಳುತ್ತಿದ್ದು, ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶ ಸಂಖ್ಯೆ 72/98, ಜುಲೈ 21, 2005 ರ ಪ್ರಕಾರ ನಿಯಮಕ್ಕಿಂತ (ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ) ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವದಾಗಲಿ ನಿಷೇಧಿಸಲ್ಪಟ್ಟಿದೆ.

ಆದ್ದರಿಂದ ಸಾರ್ವಜನಿಕರು ನಿಯಮಕ್ಕಿಂತ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂದು ತಿಳಿಸಲಾಗಿದೆ, ಅಲ್ಲದೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನೀಷೆಧಿಸಲಾಗಿದೆ.

ದಿನದ ಯವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತ ಮುತ್ತ ಯಾವೂದೇ ರೀತಿಯ ಶಬ್ದ ಉಂಟು ಮಾಡುವ ನಿಷೇಧಿತ ಪಟಾಕಿ/ ಸಿಡಿಮದ್ದು ಸಿಡಿಸಬಾರದು.

ನಗರ ಮತ್ತು ಪಟ್ಟಣದ ಚಿಕ್ಕಚಿಕ್ಕ ಬೀದಿಗಳಲ್ಲಿ ಪಟಾಕಿ ಮತ್ತು ಸಿಡಿಮದ್ದುಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವದರಿಂದ ಅಲ್ಲಿ ನಿವಾಸಿಗಳಿಗೆ ಹಾನಿಯುಂಟಗುವ ಅಥವಾ ಬೆಂಕಿ ಹಾಗೂ ಸ್ಫೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಸಿಡಿಸಲು ವಿನಂತಿಸಲಾಗಿದೆ.

ಅಲ್ಲದೇ ದೀಪಾವಳಿ ಹಬ್ಬವನ್ನು ಸಿಡಿಮದ್ದು, ಪಟಾಕಿಗಳನ್ನು ಉಪಯೋಗಿಸದೇ ದೀಪದ ಹಬ್ಬವನ್ನಾಗಿ ಆಚರಿಸಬಹುದು ಹಬ್ಬದ ಸಮಯದಲ್ಲಿ ಸಾರ್ವಜನಿಕರು ಸಹಕಾರಿಸುವಂತೆ ಮಂಗಳೂರು ಪರಿಸರ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

 

Comments are closed.