ಕರಾವಳಿ

ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬಗ್ಗೆ ಅವಹೇಳನೆ ಆರೋಪ : ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ

Pinterest LinkedIn Tumblr

ಮಂಗಳೂರು, ಅಕ್ಟೋಬರ್.19: ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ಕೀಳುಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿರುವ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ಮಠಂದೂರು ಅವರ ಈ ಕೃತ್ಯವನ್ನು ಖಂಡಿಸಿಸುವುದಾಗಿ ತಿಳಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವರು ವಿಟ್ಲದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ಕೀಳುಪದ ಬಳಕೆ ಮಾಡಿದ್ದಾರೆ. ಈ ಬಗ್ಗೆ ವಾರದೊಳಗೆ ಸಂಜೀವ ಮಠಂದೂರು ಕ್ಷಮೆಯಾಚಿಸದಿದ್ದರೆ ಅವರ ವಿರುದ್ಧ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ರಾಷ್ಟ್ರೀಯ ಪಕ್ಷವೊಂದರ ಜಿಲ್ಲಾಧ್ಯಕ್ಷರ ಈ ಹೇಳಿಕೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ವಾರದೊಳಗೆ ಕ್ಷಮೆ ಯಾಚಿಸದಿದ್ದರೆ ಅವರು ರಾಜೀನಾಮೆ ನೀಡುವವರೆಗೂ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹರೀಶ್ ಕುಮಾರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಭಾಪತಿ, ಮೂಡ ಮಾಜಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ, ಮನಪಾ ಸದಸ್ಯರಾದ ನವೀನ್ ಡಿ’ಸೋಜ, ಸಂತೋಷ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Comments are closed.