ಕರಾವಳಿ

ಕಾಂಗ್ರೆಸ್ ಕಾರ್ಯಕರ್ತರ ತಳ್ಳಾಟಕ್ಕೆ ಜಖಂಗೊಂಡ ಮಿನಿ ವಿಧಾನಸೌಧದ ಬಾಗಿಲು

Pinterest LinkedIn Tumblr

ಬಂಟ್ವಾಳ, ಅಕ್ಟೋಬರ್.22: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ.ಸಿ.ರೋಡ್ನಲ್ಲಿ 90 ಸೆಂಟ್ಸ್ ವಿಸ್ತೀರ್ಣದ ಜಮೀನಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಿನಿ ವಿಧಾನ ಸೌಧವನ್ನು ಬಾನುವಾರ ಮಧ್ಯಾಹ್ನ ಉದ್ಘಾಟಿಸಿದರು.

ಉದ್ಘಾಟನೆ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರ ತಳ್ಳಾಟದಿಂದ ಉದ್ಘಾಟನೆಗೆ ಮುಚ್ಚಿದ್ದ ಮಿನಿ ವಿಧಾನ ಸೌಧದ ಬಾಗಿಲು ಜಖಂಗೊಂಡಿದೆ.

ಈ ವೇಳೆ ಎಸ್ಪಿ ಸುಧೀರ್ ಕುಮಾರ್ ರೆಡ್ಡಿಯವರನ್ನೂ ಕಾಂಗ್ರೆಸ್ ಕಾರ್ಯಕರ್ತರು ತಳ್ಳಾಡಿದ್ದರಿಂದ ಮಧ್ಯ ಪ್ರವೇಶಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

Comments are closed.