ಕರಾವಳಿ

ಅಕ್ರಮ ಗಾಂಜಾ ಮಾರಾಟ : ಗಾಂಜಾ ಸಹಿತಾ ಇಬ್ಬರು ಪೊಲೀಸ್ ವಶ

Pinterest LinkedIn Tumblr

ಕೊಣಾಜೆ, ಅಕ್ಟೋಬರ್. 25: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಅಂಬ್ಲಮೊಗರು ಗ್ರಾಮದ ಮದಕ ಎಂಬಲ್ಲಿ ಮಂಗಳವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನಗರದ ಕುದ್ರೋಳಿಯ ಮಹಮ್ಮದ್ ಆಸೀಫ್ ಹಾಗೂ ಕುತ್ತಾರಿನ ಶೇಖ್ ಶಹಬಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ನಗರದ ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆಂದು ಆರೋಪಿಸಲಾಗಿದೆ.

ಆರೋಪಿಗಳು ಬೈಕ್ ಮೂಲಕ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬೈಕ್ ಹಾಗೂ ಐದು ಪ್ಯಾಕೆಟ್ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳಿಬ್ಬರು ಕೂಡ ಗಾಂಜಾ ಸೇವನೆ ಮಾಡಿದ ಬಗ್ಗೆ ಪೊಲೀಸ್ ತನಿಖೆಯಿಂದ ದೃಢಪಟ್ಟಿದ್ದು, ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Comments are closed.