ಕರಾವಳಿ

14ನೇ ಆಳ್ವಾಸ್ ನುಡಿಸಿರಿ ಸಮ್ಮೇಳನಾಧ್ಯಕ್ಷರಾಗಿ ನಾಗತಿಹಳ್ಳಿ ಚಂದ್ರಶೇಖರ್ ಆಯ್ಕೆ

Pinterest LinkedIn Tumblr

ಮಂಗಳೂರು, ಅಕ್ಟೋಬರ್ 25 : ಮೂಡುಬಿದಿರೆಯ ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಕಾಲೇಜಿನ ಆನಂದ್ ಆಳ್ವ ಸಭಾಂಗಣದಲ್ಲಿ ಈ ಬಾರಿಯ 14ನೇ ಆಳ್ವಾಸ್ ನುಡಿಸಿರಿ ಸಮ್ಮೇಳನ ಆಯೋಜಿಸಲಾಗಿದ್ದು, ಕನ್ನಡ ನಾಡು ನುಡಿ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ-2017 ಇದೇ ಡಿಸೆಂಬರ್ 1 ರಿಂದ 3 ವರೆಗೆ ಮೂರು ದಿನಗಳ ಕಾಲ ಮೂಡುಬಿದಿರೆಯಲ್ಲಿ ನಡೆಯಲಿದೆ.

ಈ ಬಾರಿಯ 14ನೇ ಆಳ್ವಾಸ್ ನುಡಿಸಿರಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನವನ್ನು ಹಿರಿಯ ಸಾಹಿತಿ ಡಾ ಸಿ ಎನ್ ರಾಮಚಂದ್ರನ್ ಉದ್ಘಾಟಿಸಲಿದ್ದಾರೆ

“ಕರ್ನಾಟಕದ ಬಹುತ್ವದ ನೆಲೆಗಳು” ಪರಿಕಲ್ಪನೆಯಡಿ ಈ ಬಾರಿಯ ಸಮ್ಮೇಳನ ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ, ಮಾಧ್ಯಮ ,ಶಿಕ್ಷಣ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಗಂಭೀರ ಚರ್ಚೆಗೆ ಈ ಸಮ್ಮೇಳನ ವೇದಿಕೆಯಾಗಲಿದೆ.

ಈ ಬಾರಿ ರಾಜ್ಯ ಮೂಲೆ ಮೂಲೆಗಳಿಂದ ಮಾತ್ರವಲ್ಲದೇ ಇತರ ರಾಜ್ಯಗಳಿಂದಲೂ ಸಾಹಿತ್ಯಾಸಕ್ತರು ನುಡಿಸಿರಿ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಆಳ್ವಾಸ್ ನುಡಿಸಿರಿಯ ಸಂಘಟಕ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವಾ ತಿಳಿಸಿದ್ದಾರೆ.

Comments are closed.