
ಮಂಗಳೂರು, ಅಕ್ಟೋಬರ್.25 : ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಸಂಚಾರಿ ವಿಭಾಗದ ನೂತನ ಎಸಿಪಿಯಾಗಿ ಮಂಜುನಾಥ ಶೆಟ್ಟಿಯವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ಇದುವರೆಗೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಸಂಚಾರಿ ವಿಭಾಗದಲ್ಲಿ ಎಸಿಪಿಯಾಗಿ ಕರ್ತವ್ಯ ನಿರ್ವಾಹಿಸುತ್ತಿದ್ದ ದಕ್ಷ ಪೊಲೀಸ್ ಅಧಿಕಾರಿಯೆಂದೇ ಖ್ಯಾತಿ ಪಡೆದ ಕೆ.ತಿಲಕ್ಚಂದ್ರ ಅವರು ಚಿಕ್ಕಮಂಗಳೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ನೂತನ ಎಸಿಪಿಯಾಗಿ ಮಂಜುನಾಥ ಶೆಟ್ಟಿಯವರನ್ನು ನೇಮಕಗೊಳಿಸಿ ಸರಕಾರ ಅದೇಶ ಹೊರಡಿಸಿದೆ.
ಮಂಜುನಾಥ ಶೆಟ್ಟಿಯವರು ಈ ಮೊದಲು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಕರ್ತವ್ಯ ನಿರ್ವಾಹಿಸಿದ್ದರು. ಸುಬ್ರಹ್ಮಣ್ಯದಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ, ಉಪ್ಪಿನಂಗಡಿ ಹಾಗೂ ಬಂಟ್ವಾಳದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ, ಮಂಗಳೂರಿನ ಕದ್ರಿ ಠಾಣೆಯಲ್ಲಿ ಸಂಚಾರಿ ವಿಭಾಗದ ಸರ್ಕಲ್ ಇನ್ಸ್ಪೆಕ್ಟರ್ ಆಗಿ, ಬಂದರು ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಇನ್ಸ್ಪೆಕ್ಟರ್ ಆಗಿ ಹಾಗೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣ್ದಲ್ಲಿ ಇಮಿಗ್ರೇಷನ್ ವಿಭಾಗದ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಮಾತ್ರವಲ್ಲದೇ ಮಂಗಳೂರಿನಿಂದ ವರ್ಗಾವಣೆಗೊಂಡ ಬಳಿಕ ಕುಂದಾಪುರದಲ್ಲಿ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಾಹಿಸಿದ ಅವರು ಇಲ್ಲಿಗೆ ವರ್ಗಾವಣೆಗೊಳ್ಳುವ ಮೊದಲು ಶಿವಮೊಗ್ಗದಲ್ಲಿ ಡಿ.ಎಸ್.ಪಿಯಾಗಿ ಕರ್ತವ್ಯ ನಿರ್ವಾಹಿಸುತ್ತಿದ್ದರು.
__ ಸತೀಶ್ ಕಾಪಿಕಾಡ್ – ಮೊಬೈಲ್ ನಂಬ್ರ : 9035089084
Comments are closed.