ಕರಾವಳಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಧರ್ಮಸ್ಥಳ ಭೇಟಿ ಹಿನ್ನೆಲೆ : ಅಧಿಕಾರಿಗಳಿಂದ ಸ್ಥಳ ಪರಿಶೀಲನೆ -ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Pinterest LinkedIn Tumblr

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಕ್ಟೋಬರ್ 29ರಂದು ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೊಬರ್ 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ಬಳಿಕ ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಮೋಹನ್, ಐಜಿಪಿ ಹೇಮಂತ್ ಲಿಂಬಾಳ್ಕರ್, ದ.ಕ. ಎಸ್ಪಿ ಸುರೇಶ್ ಕುಮಾರ್ ರೆಡ್ಡಿ, ಕಾರ್ಕಳ ಎಎಸ್ಪಿ ಹೃಷಿಕೇಶ್ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲೆಯ ಎಲ್ಲಾ ಆಯಕಟ್ಟಿನ ಸ್ಥಳಗಳು ಸೇರಿದಂತೆ ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಪ್ರಧಾನಿ ಅವರ ಭದ್ರತೆಯ ಜವಾಬ್ದಾರಿ ಹೊತ್ತಿರುವ ಎಸ್.ಪಿ.ಜಿ ಪಡೆಯ ಐಜಿ ಶ್ರೇಣಿಯ ಅಧಿಕಾರಿ ಸೇರಿದಂತೆ ಎಸ್.ಪಿ.ಜಿ ಪಡೆಯ ಕಮಾಂಡೋಗಳು ಈಗಾಗಲೇ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಧರ್ಮಸ್ಥಳಕ್ಕೆ ಆಗಮಿಸುವ ಮೋದಿಗೆ ತುಳುನಾಡಿನ ಶೈಲಿಯಲ್ಲಿ ಸ್ವಾಗತ ಕಮಾಂಡೋಗಳು ಮತ್ತು ಐಜಿ ಶ್ರೇಣಿಯ ಅಧಿಕಾರಿ ಪ್ರಧಾನಿ ಭೇಟಿ ನೀಡುವ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಬಹಿರಂಗ ಸಭೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಹಿನ್ನೆಲೆಯಲ್ಲಿ 10 ಎಸ್.ಪಿ ಶ್ರೇಣಿಯ ಅಧಿಕಾರಿಗಳು, 150 ಪಿಎಸ್ಐ, ಡಿಎಸ್ಪಿ ಶ್ರೇಣಿ ಅಧಿಕಾರಿಗಳು ಸೇರಿದಂತೆ 2000 ಪೊಲೀಸ್ ಸಿಬ್ಬಂದಿ ಗಳನ್ನು ಬಂದೋಬಸ್ತಿಗೆ ನಿಯೋಜಿಸಲಾಗಿದೆ. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸಿಬ್ಬಂದಿ ಸಾಥ್ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸಿಬ್ಬಂದಿಗಳು ಈಗಾಗಲೇ ಧರ್ಮಸ್ಥಳದಲ್ಲಿ ಬೀಡು ಬಿಟ್ಟಿದ್ದು ಎಲ್ಲೆಡೆ ಪರಿಶೀಲನೆ ನಡೆಸಿದ್ದಾರೆ.

ನಕ್ಸಲ್ ನಿಗ್ರಹ ದಳ ಈಗಾಗಲೇ ಧರ್ಮಸ್ಥಳ ಆಸುಪಾಸಿನ ಅರಣ್ಯ ಪ್ರದೇಶ ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ. ಒಟ್ಟಿನಲ್ಲಿ ನರೇಂದ್ರ ಮೋದಿ ಆಗಮನಕ್ಕೆ ಧರ್ಮಸ್ಥಳ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ.

Comments are closed.