ಕರಾವಳಿ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರಲಿದ್ದಾರೆ 1 ಲಕ್ಷಕ್ಕೂ ಹೆಚ್ಚು ಮಂದಿ..

Pinterest LinkedIn Tumblr

ಮಂಗಳೂರು, ಅಕ್ಟೋಬರ್.26: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಕ್ಟೋಬರ್ 29ರಂದು ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಈ ಕಾರ್ಯಕ್ರಮದಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಮಾಹಿತಿ ನೀಡಿದ್ದಾರೆ.

ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.29ರಂದು ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಈ ಕಾರ್ಯಕ್ರಮ ಇದೊಂದು ಸಾರ್ವಜನಿಕ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಮುಕ್ತ ಅವಕಾಶವಿದೆ.

ಇದರಲ್ಲಿ ಉಡುಪಿ ಮತ್ತು ದ.ಕ.ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಪ್ರಧಾನಿಯ ಜೊತೆ ಕೇಂದ್ರ ಸಚಿವರಾದ ಸದಾನಂದ ಗೌಡ, ಅನಂತ ಕುಮಾರ್, ಅನಂತ ಕುಮಾರ್ ಹೆಗಡೆ, ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ವೇದವ್ಯಾಸ ಕಾಮತ್, ಪಕ್ಷದ ಪ್ರಮುಖರಾದ ಜಿತೇಂದ್ರ ಕೊಟ್ಟಾರಿ, ಸಂಜಯ ಪ್ರಭು ಉಪಸ್ಥಿತರಿದ್ದರು.

Comments are closed.