
ಮಂಗಳೂರು, ಅಕ್ಟೋಬರ್. 27: ನಗರದಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಮಾಡುವವರ ಪತ್ತೆಯ ಬಗ್ಗೆ ಇಕೋನಾಮಿಕ್ ಎಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣಾ ಪೊಲೀಸರು ಕೈಗೊಂಡಿರುವ ಕಾರ್ಯಾಚರಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಧಿಸಿದ್ದಾರೆ.
ಆಶೋಕ್ ನಗರದ ತಿಲಕ್ ರಾವ್ ಯಾನೆ ತಿಲ್ಲು ಯಾನೆ ರಾಜ್ (22) ಬಂಧಿತ ಆರೋಪಿಯಾಗಿದ್ದು, ಈತ ಅನೀಸ್ ಎಂಬಾತನಿಗೆ ಗಾಂಜಾ ಮಾರಾಟ ಮಾಡಿದ್ದ ಬಗ್ಗೆ ಸೆ. 11ರಂದು ಇಕೋನಾಮಿಕ್ ಎಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗುರುವಾರ ನಗರದ ಉರ್ವಾ ಮಾರ್ಕೆಟ್ ಬಳಿ ಇಕೋನಾಮಿಕ್ ಎಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಅವರ ಆದೇಶದಂತೆ ಡಿಸಿಪಿ ಹನುಮಂತರಾಯ ಮತ್ತು ಡಿ.ಸಿ.ಪಿ. ಶ್ರೀಮತಿ ಉಮಾ ಪ್ರಶಾಂತ್ ಅವರ ನಿರ್ದೇಶನ ಹಾಗೂ ಸಿಸಿ ಆರ್ ಬಿ ಎಸಿಪಿ ವೆಲಂಟೈನ್ ಡಿ’ಸೋಜ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್ ಮಹಮ್ಮದ್ ಶರೀಫ್, ಎಸೈ ಶ್ರೀಮತಿ ಲತಾ ಕೆ.ಎನ್ ಮತ್ತು ಸಿಬ್ಬಂದಿಗಳಾದ ಜಗದೀಶ್, ಶಾಜು ನಾಯರ್, ಕಿಶೋರ್ ಪೂಜಾರಿ ಮುಂತಾದವರು ಪಾಲ್ಗೊಂಡಿದ್ದರು.
Comments are closed.