ಕುಂದಾಪುರ: ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ರೇಖಾ(28) ಆತ್ಮಹತ್ಯೆಗೆ ಶರಣಾದ ಮಹಿಳೆ. ಕುಂದಾಪುರ ತಾಲೂಕಿನ ಹಾಲಾಡಿ-76 ತತ್ತೋಟ್ಟು ಎಂಬಲ್ಲಿ ಘಟನೆ ನಡೆದಿದೆ.
ಸುಮಾರು ಹತ್ತು ವರ್ಷಗಳ ಹಿಂದೆ ಕೂಲಿ ಕೆಲಸ ಮಾಡಿಕೊಂಡಿದ್ದ ಚಂದ್ರ ನಾಯ್ಕ್ ಎಂಬಾತನನ್ನು ಮದುವೆಯಾಗಿದ್ದ ರೇಖಾ ಅವರಿಗೆ 8 ವರ್ಷ, ಹಾಗೂ 5 ವರ್ಷದ ಗಂಡು ಮಕ್ಕಳಿದ್ದಾರೆ. ಮನೆ ಸಮೀಪದಲ್ಲಿನ ಪೇರಳೆ ಮರಕ್ಕೆ ನೇಣು ಬಿಗಿದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ನಿರಂತರ ಕಿರುಕುಳದಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಗಂಡ, ಮಾವ, ಅತ್ತೆ, ಭಾವ, ಮೈದುನ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.