ಕರಾವಳಿ

ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಆರೋಪಿ ಸೆರೆ : ಗಾಂಜಾ ಸಹಿತಾ 1.19 ಲಕ್ಷ ರೂ.ಮೌಲ್ಯದ ಸೊತ್ತು ವಶ

Pinterest LinkedIn Tumblr

ಮಂಗಳೂರು, ಅಕ್ಟೋಬರ್ 31: ಮಂಗಳೂರಿನ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಆರೋಪಿಯೊಬ್ಬನನ್ನು ಮಂಗಳೂರು ನಗರ ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಗುರುಪುರ ಕೈಕಂಬದ ಕಿನ್ನಿಕಂಬಳ ನಿವಾಸಿ ಮುಹಮ್ಮದ್ ಶಾಕೀರ್ (23) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಆರೋಪಿಯಾಗಿದ್ದು, ಸೋಮವಾರ ಕೋಡಿಕಲ್ ನ 10ನೇ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಆರೋಪಿಯನ್ನು ಬಂಧಿಸಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ರೌಡಿ ನಿಗ್ರಹ ದಳದ ಪೊಲೀಸರು ದಾಳಿ ನಡೆಸಿ ಆರೋಪಿ ಮೊಹಮ್ಮದ್ ಶಕೀರ್ ನನ್ನು ಬಂಧಿಸಿದ್ದಾರೆ. ಬಂಧಿತನಿಂದ 1.8 ಕೆಜಿ ಗಾಂಜಾ, 2 ಮೊಬೈಲ್, ಒಂದು ಬೈಕ್ ಸೇರಿದಂತೆ ಒಟ್ಟು 1.19 ಲಕ್ಷ ರೂಪಾಯಿ ಮೌಲ್ಯದ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉರ್ವ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ರೌಡಿ ನಿಗ್ರಹ ದಳದ ಮುಖ್ಯಸ್ಥ ಉದಯ ನಾಯಕ್, ಇನ್ಸ್ಪೆಕ್ಟರ್ ರವೀಶ್ ನಾಯಕ್, ಕೃಷ್ಣ ಬಿ., ಎಸ್ಸೈ ಬಾಲಕೃಷ್ಣ ಮತ್ತಿತರರು ಪಾಲ್ಗೊಂಡಿದ್ದರು.

Comments are closed.