ಕರಾವಳಿ

ಕಟೀಲು ದುರ್ಗಾಪರಮೇಶ್ವರಿ ದೇವಿ ಬಗ್ಗೆ ಮತ್ತೆ ಅವಹೇಳನಕಾರಿ ಸಂದೇಶ : ಭಾರೀ ಆಕ್ರೋಶ

Pinterest LinkedIn Tumblr

ಮಂಗಳೂರು, ನ,2: ಕಟೀಲು ದುರ್ಗಾಪರಮೇಶ್ವರಿ ದೇವಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಅವಹೇಳನಕಾರಿ ಸಂದೇಶ ಕಳಿಸಿರುವ ಘಟನೆ ನಡೆದಿದ್ದು, ಈ ಬಗ್ಗೆ ವ್ಯಾಪಕ ಆಕ್ರೋಷ ವ್ಯಕ್ತವಾಗಿದೆ.

ಜಬ್ಬಾರ್ ಮಂಗಳೂರು ಎನ್ನುವ ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಶ್ರೀ ರಾಮ, ಸೀತೆ, ಕಟೀಲು ದುರ್ಗಾಪರಮೇಶ್ವರಿ, ಸ್ವಾಮಿ ಕೊರಗಜ್ಜ ಸೇರಿದಂತೆ ಎಲ್ಲಾ ಹಿಂದೂ ದೇವಿ-ದೇವರುಗಳ ವಿರುದ್ಧ ಅತ್ಯಂತ ಕೀಳುಮಟ್ಟದ ಅಸಹ್ಯಕರ ಭಾಷೆ ಬಳಸಿ ಪೋಸ್ಟ್ ಗಳನ್ನು ಹಾಕಲಾಗಿದೆ.ಇದರ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಹಿಂದೆ ಜಬ್ಬಾರ್ ಬಿ.ಸಿ ರೋಡ್ ಎನ್ನುವ ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಿಯ ಬಗ್ಗೆ ಅವಹೇಳನಕಾರಿ ಬರಹ ಪೋಸ್ಟ್ ಮಾಡಲಾಗುತ್ತು. ಇದರಿಂದ ಕೆರಳಿದ್ದ ಹಿಂದೂ ಸಂಘಟನೆಗಳು ರಸ್ತೆಗಿಳಿದು ಹೋರಾಟ ನಡೆಸುವ ಮೂಲಕ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದವು.

ಈ ಪ್ರಕರಣದ ವಿರುದ್ಧ ಪ್ರತಿಭಟನೆಗಳ ಕಾವು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ, ಜಬ್ಬಾರ್ ಬಿ.ಸಿ ರೋಡ್ ಫೇಸ್‌ಬುಕ್‌ ಖಾತೆಯ ವಿರುದ್ಧ ತನಿಖೆ ಆರಂಭಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಿದೀನ್ ಹಾಗೂ ಶಫಿ ಎಂಬುವವರನ್ನು ಬಂಧಿಸಲಾಗಿತ್ತು.

ಇದೀಗ ಮತ್ತೆ ಜಬ್ಬಾರ್ ಮಂಗಳೂರು ಎನ್ನುವಾತ ಫೇಸುಬುಕ್ ಖಾತೆಯಲ್ಲಿ ಕಟೀಲು ದುರ್ಗಾಪರಮೇಶ್ವರಿ ಅಮ್ಮನ ಬಗ್ಗೆ ಅಶ್ಲೀಲ ಪದಗಳ ಮೂಲಕ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ್ದಾನೆ.ಇದೀಗ ಈ ವ್ಯಕ್ತಿ ತನ್ನ ಖಾತೆಯನ್ನು ಡಿಲೀಟ್ ಮಾಡಿದ್ದರೂ, ಈತನ ಕಮೆಂಟ್ ಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.

Comments are closed.