ಕರಾವಳಿ

ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ…

Pinterest LinkedIn Tumblr

ಮಂಗಳೂರು, ನವೆಂಬರ್, 3: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ನವೆಂಬರ್ ೬ರಂದು ಡಾ.ಜಿ.ಪರಮೇಶ್ವರ್, ಕೆ.ಸಿ.ವೇಣುಗೋಪಾಲ್ ಸಹಿತಾ ಸಚಿವರು ಹಾಗೂ ಪಕ್ಷದ ರಾಜ್ಯ ಮುಖಂಡರು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನ.4ರಂದು ಮಂಗಳೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ 10ಕ್ಕೆ ನಗರದ ಕೇಂದ್ರ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಕರಾಟೆ ಸ್ಪರ್ಧೆಯನ್ನು ಉದ್ಘಾಟಿಸಲಿರುವರು ಎಂದು ನುಡಿದರು.

ನವೆಂಬರ್ 6ರಂದು ಕಾಂಗ್ರೆಸ್ ಮುಖಂಡರ ದಂಡು ಮಂಗಳೂರಿಗೆ..

ನವೆಂಬರ್ 6ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರೊಂದಿಗೆ ಪಕ್ಷದ ರಾಜ್ಯಾಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್, ಎಐಸಿಸಿ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ವಿಶ್ವನಾಥ್, ಸಚಿವ ಡಿಕೆ ಶಿವಕುಮಾರ್ ಭಾಗವಹಿಸಲಿದ್ದಾರೆ. ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಪಕ್ಷದ ಮುಖಂಡರು ಹಾಗೂ ಶಾಸಕರೊಂದಿಗೆ ವಿಚಾರ ವಿನಿಮಯ ಮಾಡಲಿದ್ದಾರೆ ಎಂದು ರಮಾನಾಥ ರೈ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಮೇಯರ್ ಕವಿತಾ ಸನಿಲ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪಕ್ಷದ ಪ್ರಮುಖರಾದ ನವೀನ್ ಡಿಸೋಜ, ಸಂತೋಷ್ ಕುಮಾರ್ ಶೆಟ್ಟಿ, ನಝೀರ್ ಬಜಾಲ್, ಪ್ರವೀಣ್ ಕುಮಾರ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Comments are closed.