ಕರಾವಳಿ

ಮಂಗಳೂರು ವಿಮಾನ ನಿಲ್ದಾಣದ ಶೌಚಾಲಯದಲ್ಲಿ 34 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ ಪತ್ತೆ

Pinterest LinkedIn Tumblr

ಮಂಗಳೂರು, ನವೆಂಬರ್. 4: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯವೊಂದರಲ್ಲಿ 1,166.5 ಗ್ರಾಂ ಚಿನ್ನ ಪತ್ತೆಯಾಗಿದೆ. ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಈ ಚಿನ್ನವನ್ನು ಪತ್ತೆ ಹಚ್ಚಿದ್ದಾರೆ.

ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಶುಕ್ರವಾರ ರಾತ್ರಿ ಆಗಮಿಸಿದ ಸ್ಪೈಸ್ಜೆಟ್ನ ಪ್ರಯಾಣಿಕನೋರ್ವರು ಇದನ್ನು ಶೌಚಾಲಯದಲ್ಲಿ ಬಿಟ್ಟು ಹೋಗಿರಬೇಕೆಂದು ಶಂಕಿಸಲಾಗಿದೆ.

ಶೌಚಾಲಯದಲ್ಲಿ ಪ್ಯಾಕ್ ಮಾಡಲಾಗಿದ್ದ ವಸ್ತುವೊಂದು ಕಂಡುಬಂದಿದ್ದರಿಂದ ಅದನ್ನು ತೆರೆದು ನೋಡಿದಾಗ 10 ಚಿನ್ನದ ಬಾರ್ ಗಳು ಪತ್ತೆಯಾಗಿದೆ. ಪತ್ತೆಯಾದ ಚಿನ್ನದ ಒಟ್ಟು ವೌಲ್ಯ 34,17,845 ರೂ. ಎಂದು ಅಂದಾಜಿಸಲಾಗಿದೆ.

Comments are closed.