ಕುಂದಾಪುರ: ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ ಸಮೀಪದ ಬೋಟ್ ಬಿಲ್ಡಿಂಗ್ ವಠಾರದಲ್ಲಿ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕುಂದಾಪುರ ತಾಲೂಕಿನ ಕುಂಭಾಶಿ ಸಮೀಪದ ಉಮೇಶ್ ಮೊಗವೀರ (29) ಮೃತ ಯುವಕ.
ಬೋಟ್ ಚಾಲಕನಾಗಿದ್ದ ಉಮೇಶ್ ಕಟ್ಟಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಗಂಗೊಳ್ಳಿ ಠಾಣಾಧಿಕಾರಿ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಸಾವಿನ ಬಗ್ಗೆ ಸಂಶಯವಿರುವ ಕಾರಣ ಮೃತದೇಹವನ್ನು ಮಣಿಪಾಲ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.