ಕರಾವಳಿ

ಟಿಪ್ಪು ಜಯಂತಿ ಆಚರಣೆಗೆ ಸಕಲ ಸಿದ್ಧತೆ ಪೂರ್ಣ – ಯಾವುದೇ ಇತರ ಕಾರ್ಯಕ್ರಮ, ಮೆರವಣಿಗೆಗೆ ಅವಕಾಶವಿಲ್ಲ :ಡಿಸಿ

Pinterest LinkedIn Tumblr

ಮಂಗಳೂರು, ನವೆಂಬರ್.9: ಸರಕಾರದ ಆದೇಶದಂತೆ ನಾಳೆ ದ.ಕ. ಜಿಲ್ಲೆಯಲ್ಲಿಯೂ ಟಿಪ್ಪು ಜಯಂತಿ ಆಚರಣೆಗೆ ಸಿದ್ಧತೆ ನಡೆಸಲಾಗಿದೆ. ಈ ವೇಳೆ ಯಾವೂದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ಏಕ ಸ್ಥಳದಲ್ಲಿ ಮಾತ್ರವೇ ಆಚರಿಸಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿ ಬೇರೆ ಕಾರ್ಯಕ್ರಮ ಇರುವುದಿಲ್ಲ. ಅನುಮತಿಯನ್ನೂ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ನವೆಂಬರ್ 10ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಟಿಪ್ಪು ಜಯಂತಿ ಆಚರಣೆ ಇತರ ಸರಕಾರಿ ಆಚರಣೆ, ಕಾರ್ಯಗ್ರಮಗಳಂತೆ ಅದ್ದೂರಿಯಾಗಿ ನಡೆಯಲಿದೆ. ಟಿಪ್ಪು ಜಯಂತಿಗೆ ಸಂಬಂಧಿಸಿ ಯಾವುದೇ ಮೆರವಣಿಗೆ ಇರುವುದಿಲ್ಲ. ಶಾಂತಿಯುತ ಹಾಗೂ ಸುರಕ್ಷತೆಯೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಸಕಲ ವ್ಯವಸ್ಥ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದರು.

ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ ನಡೆಸುವ ಕುರಿತಂತೆ ಜಿಲ್ಲಾಡಳಿತಕ್ಕೆ ಯಾವುದೇ ಮನವಿ ಬಂದಿಲ್ಲ. ಅದರೂ ಯಾವುದೇ ರೀತಿಯ ಅಹಿತಕರ ಘಟನೆ, ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿ೯ಕಾರಿಗಳು ತಿಳಿಸಿದರು.

ನಳಿನ್ ಕುಮಾರ್ ಹಾಗೂ ಕಾರ್ನಿಕ್ ಹೆಸರು ಆಹ್ವಾನ ಪತ್ರಿಕೆಯಿಂದ ಕೈಬಿಡಲಾಗಿದೆ: ಕುಮಾರ್

ಅಪರ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ವಿಧಾನ ಪರಿಷತ್ನ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಜಿಲ್ಲಾಡಳಿತಕ್ಕೆ ಲಿಖಿತವಾಗಿ ಮನವಿ ಸಲ್ಲಿಸಿ ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಮುದ್ರಿಸದಂತೆ ತಿಳಿಸಿರುವ ಹಿನ್ನೆಲೆಯಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಉಪಸ್ಥಿತರಿದ್ದರು.

Comments are closed.