ಕರಾವಳಿ

ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ ಫ್ರಾಂಕ್ಲಿನ್‌ ಮೊಂತೆರೋ ಬಂಧನ

Pinterest LinkedIn Tumblr

ಮಂಗಳೂರು, ನವೆಂಬರ್.10 :ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳ ತೀವ್ರ ವಿರೋಧದ ನಡುವೆಯೇ ರಾಜ್ಯ ಸರಕಾರದ ವತಿಯಿಂದ ಹಮ್ಮಿಕೊಳ್ಳಲಾದ ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸಿ ಅಲ್ಲಲ್ಲಿ ಪ್ರತಿಭಟನೆಗಳು ನಡೆದಿದ್ದು ಹಲವರನ್ನು ವಶಕ್ಕೆ ಪಡೆಯಾಲಾಗಿದೆ.

ಇದೇ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಇಂದು ಬೆಳಿಗ್ಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಏಕಾಂಗಿಯಾಗಿ ಬಂದಿದ್ದ ಬಿಜೆಪಿ ನಾಯಕ ಫ್ರಾಂಕ್ಲಿನ್‌ ಮೊಂತೆರೋ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರ್ಯಕ್ರಮ ನಡೆಯುವ .ಕ. ಜಿಪಂನ ನೇತ್ರಾವತಿ ಸಭಾಂಗಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಇಂದು ಬೆಳಗ್ಗೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರತಿಯೋರ್ವರನ್ನು ಪೊಲೀಸರು ತಪಾಸಣೆ ನಡೆಸಿಯೇ ಸಭಾಂಗಣದೊಳಗೆ ಬಿಡುತ್ತಿದ್ದಾರೆ. ಮಾಧ್ಯಮದವರನ್ನು ಕೂಡಾ ತಪಾಸಣೆಗೊಳಪಡಿಸಿಯೇ ಒಳಬಿಡಲಾಗುತ್ತಿದೆ.

ಇದೇ ವೇಳೆ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡರಾದ ಫ್ರಾಂಕ್ಲಿನ್ ಮೊಂತೆರೋ ಅವರನ್ನು ಪೊಲೀಸರು ವಶಕ್ಕೆ ಪಡೆದರು.

 

ಜಿಪಂ ಕಚೇರಿ ಆವರಣದಲ್ಲಿ 500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಬಹುದೆಂದು ಪೊಲೀಸರು ನಿಗಾ ಇಟ್ಟಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಮಂದಿಯನ್ನೂ ತಪಾಸಣೆ ನಡೆಸಿಯೆ ಒಳಬಿಡುತ್ತಿದ್ದಾರೆ.

ಟಿಪ್ಪು ಜಯಂತಿ ಹಿನ್ನೆಲಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಲ್ಲಿ ಭದ್ರತಾ ಕಾರ್ಯಕ್ಕೆ 2,000 ಪೊಲೀಸರನ್ನು ಪೊಲೀಸರನ್ನು ನಿಯೋಜಿಸಲಾಗಿದೆ, ಇದರ ಜೊತೆಗೆ ರಾಜ್ಯ ಮೀಸಲು ಪೊಲೀಸ್ ಪಡೆಯ 13 ತುಕಡಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಯ (ಆರ್ ಎ ಎಫ್) ಒಂದು ಕಂಪನಿ ನಗರದಲ್ಲಿ ನಿಯೋಜಿಸಲಾಗಿದೆ

ಟಿಪ್ಪು ಜಯಂತಿ ಹಾಗೂ ಬಿಜೆಪಿಯ ಪರಿವರ್ತನಾ ಯಾತ್ರೆ ಸಮಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ 127 ಗೂಂಡಾಗಳಿಂದ ಭದ್ರತಾ ಬಾಂಡ್ ಪಡೆಯಲಾಗಿದೆ.

Comments are closed.