ಕರಾವಳಿ

ಚಪ್ಪಲ್‌ನಲ್ಲಿ ಅಕ್ರಮ ಚಿನ್ನ ಸಾಗಾಟ :24 ಲಕ್ಷ ರೂ. ಮೌಲ್ಯದ ಚಿನ್ನ ಸಹಿತಾ ದುಬೈ ಯಾನಿಯ ಬಂಧನ

Pinterest LinkedIn Tumblr

ಮಂಗಳೂರು, ನವೆಂಬರ್ 27 ; ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಬಾರಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಿಶಿಷ್ಟ ಶೈಲಿಯ ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾಸರಗೋಡು ನಿವಾಸಿ ಅಹ್ಮದ್ ತಾಹೀರ್ ಎಂದು ಗುರುತಿಸಲಾಗಿದ್ದು, ಆರೋಪಿ ಚಪ್ಪಲ್ ನಲ್ಲಿ ಚಿನ್ನವನ್ನು ಅಡಗಿಸಿ ಸಾಗಾಟಕ್ಕೆ ಯತ್ನಿಸಿ ಇದೀಗ ಪೊಲೀಸರ ಅಥಿತಿಯಾಗಿದ್ದಾನೆ.ಆರೋಪಿಯಿಂದ 804 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೋರ್ವನ ವರ್ತನೆಯಿಂದ ಕಸ್ಟಮ್ಸ್ ಅಧಿಕಾರಿಗಳು ಸಂಶಯಗೊಂಡಿದ್ದಾರೆ. ತಕ್ಷಣ ಆತನನ್ನು ತನಿಖೆಗೆ ಒಳಪಡಿಸಿದಾಗ ಈ ಅಕ್ರಮ ಚಿನ್ನ ಸಾಗಾಟ ಬಯಲಾಗಿದೆ.

ಕಾಸರಗೋಡು ನಿವಾಸಿ ಅಹ್ಮದ್ ತಾಹೀರ್ ದುಬೈಯಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ IX814 ವಿಮಾನ ಮೂಲಕ ಮಂಗಳೂರಿಗೆ ಬಂದಿಳಿದಿದ್ದ . ತಾಹಿರ್ ವರ್ತನೆ ಬಗ್ಗೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತನಿಖೆಗೆ ಒಳಪಡಿಸಿದ್ದಾರೆ.

ಈ ಸಂದರ್ಭದಲ್ಲಿ ತಾಹಿರ್ ಧರಿಸಿದ್ದ ಚಪ್ಪಲ್ ನಲ್ಲಿ ಅಡಗಿಸಿ ಚಿನ್ನ ಸಾಗಾಟ ಪ್ರಕರಣ ಪತ್ತೆಯಾಗಿದೆ. ಚಪ್ಪಲ್ ನ ಸೋಲ್ ನಲ್ಲಿ ತಾಹೀರ್ ಚಿನ್ನದ ಗಟ್ಟಿಗಳನ್ನು ಅಡಗಿಸಿಟ್ಟಿದ್ದ . ಚಪ್ಪಲ್ ನಲ್ಲಿ ಅಡಗಿಸಿ ಇಡಲಾಗಿದ್ದ 804 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 24 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಹಮ್ಮದ್ ತಾಹಿರ್ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗೆಳು ತನಿಖೆ ಮುಂದುವರೆಸಿದ್ದಾರೆ.

Comments are closed.