ಕರಾವಳಿ

ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಅಂಬೇಡ್ಕರ್ ಅವರ ಪರಿಶ್ರಮ ಅಪಾರ : ಸಚಿವ ರೈ

Pinterest LinkedIn Tumblr

ಮಂಗಳೂರು, ಡಿಸೆಂಬರ್.6: ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ಪ್ರಯುಕ್ತ ಬುಧವಾರ ನಗರದ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವಾರ್ಪಣೆ ಕಾರ್ಯಕ್ರಮ ಜರಗಿತು.

ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವಾರ್ಪಣೆ ಸಮರ್ಪಿಸಿದರು. ಬಳಿಕ ಮಾತನಾಡಿದ ಅವರು,ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮ ಅಪಾರವಿದೆ. ದೇಶದ ಸಂವಿಧಾನ ರಚನೆಯ ಮೂಲಕ ಮಾನವ ಕುಲಕ್ಕೆ ನ್ಯಾಯ ದೊರಕಿಸಿಕೊಟ್ಟಿದ್ದಾರೆ. ಇಂತವರನ್ನು ಪ್ರತೀ ದಿನವೂ ನೆನಪು ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಾಮಾಜಿಕ ನ್ಯಾಯ ವ್ಯವಸ್ಥೆಯಲ್ಲಿ ಬಲಿತ ಎಂದಿಗೂ ದಲಿತರ ಪರವಾಗಿ ನಿಲ್ಲುವುದಿಲ್ಲ. ದಲಿತನ ನೋವು ದಲಿತನಿಗೆ ಮಾತ್ರ ತಿಳಿದಿರುತ್ತದೆ. ಬಲಿತನಿಗೆ ದಲಿತನ ನೋವು ಕಾಣಿಸುವುದಿಲ್ಲ. ಇದೇ ಕಾರಣದಿಂದ ದಲಿತರು ಆಕ್ರೋಶದಿಂದ ಮಾತಿಗಳಿದಾಗ ಅವರ ನೋವು ಎದ್ದು ಕಾಣುತ್ತದೆ ಎಂದರು.

ಜಿಲ್ಲಾಧಿಕಾರಿ ಸಸಿಕುಮಾರ್ ಸೆಂಥಿಲ್, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಜಿ.ಪಂ ಸಿಇಒ ಡಾ.ಎಂ.ಆರ್.ರವಿ, ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮುಡ್ನೂರುಹಾಗೂ ಮತ್ತಿತ್ತರ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

Comments are closed.