ಮಂಗಳೂರು, ಡಿಸೆಂಬರ್.9: ಮಂಗಳೂರಿನ ಕಂಕನಾಡಿ ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ.
ಕಂಕನಾಡಿ ನಗರ ಠಾಣೆ ಪೊಲೀಸರು ಗಸ್ತಿನಲ್ಲಿರುವ ಸಂದರ್ಭದಲ್ಲಿ ಈ ಅಕ್ರಮ ಹಣ ಸಾಗಾಣಿಕೆ ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿ ನಿವಾಸಿಗಳಾದ ತಾನಾಜಿ (54), ಅಮೂಲ್ ಮಾಲಿ(29), ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ ದಿನೇಶ್ ಪ್ರಕಾಶ್ ಶಿಂಧೆ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದು ಕೋಟಿ ರೂಪಾಯಿ ನಗದು, ಒಂದು ಕಾರು, ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಂಕನಾಡಿ ನಗರ ಠಾಣೆ ಪೊಲೀಸರು ಗಸ್ತಿನಲ್ಲಿರುವ ಸಂದರ್ಭದಲ್ಲಿ ಅಕ್ರಮ ಹಣ ಸಾಗಾಣಿಕೆ ಬಗ್ಗೆ ದೊರೆತ ಖಚಿತ ಮಾಹಿತಿಯನ್ವಯ ಪೊಲೀಸರು ಪಂಪ್ ವೆಲ್ ವೃತ್ತದ ಬಳಿ ಕಾರ್ಯಾಚರಣೆ ನಡೆಸಿ ಅಕ್ರಮ ಹಣ ಸಾಗಾಣಿಕೆ ಪ್ರಕರಣವನ್ನು ಪತ್ತೆಹಚ್ಚಿದ್ದಾರೆ. ಹುಂಡೈ ಐ20 ಕಾರನ್ನು ಅಡ್ಡಗಟ್ಟಿ, ತಪಾಸಣೆ ನಡೆಸಿದಾಗ ಈ ಅಕ್ರಮ ಹಣ ಸಾಗಾಣಿಕೆ ಪತ್ತೆಯಾಗಿದೆ.