ಕರಾವಳಿ

ಜಾನಪದ ಕಲೆಗಳನ್ನು ಯುವ ಜನತೆ ಉಳಿಸಬೇಕು- ದಿನಕರ ಬಾಬು

Pinterest LinkedIn Tumblr

ಉಡುಪಿ: ಗ್ರಾಮೀಣ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಯುವಜನ ಮೇಳಗಳು ಸಹಕಾರಿಯಗಲಿದ್ದು, ಯುವ ಜನರು ಜಾನಪದ ಕಲೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು ಮತ್ತು ಯುವ ಜನ ಮೇಳಗಳನ್ನು ಗ್ರಾಮೀಣ ಭಾಗದಲ್ಲಿ ಏರ್ಪಡಿಸುವುದರಿಂದ , ಗ್ರಾಮೀಣ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಾಧ್ಯ ಎಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಅವರು ಶನಿವಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ನವಚೇತನ ಯುವಕ/ಯುವತಿ ಮಂಡಲ , ಕಟ್ಟೆಗುಡ್ಡೆ ಕುತ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ , ಜಿಲ್ಲಾ ಮಟ್ಟದ ಯುವಜನಮೇಳ 2017-18 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ , ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನಳನಿ ಪ್ರದೀಪ್ ರಾವ್ ಮಾತನಾಡಿ, ಯುವ ಜನತೆ ತಮ್ಮಲ್ಲಿನ ಪ್ರತಿಭೆ ಪ್ರದರ್ಶಿಸಲು ಯುವಜನ ಮೇಳಗಳು ಸಹಕಾರಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ , ಉಡುಪಿ ಜಿಲ್ಲಾ ಮಟ್ಟದ ಯುವ ಪ್ರಶಸ್ತಿಯನ್ನು , ನವಚೇತನ ಯುವಕ ಮಂಡಲದ ಅಧ್ಯಕ್ಷ ಗಿರೀಶ್ ಕುಮಾರ್ ಅವರಿಗೆ ಹಾಗೂ ಜಿಲ್ಲಾ ಯುವ ಸಾಂಘಿಕ ಪ್ರಶಸ್ತಿಯನ್ನು ಕುತ್ಯಾರು ಯುವಕ ಮಂಡಲಕ್ಕೆ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಡೆಕಾರ್ ಗ್ರಾ.ಪಂ ಅಧ್ಯಕ್ಷ ರಘುನಾಥ್ ಕೋಟ್ಯಾನ್, ಉಪಾಧ್ಯಕ್ಷೆ ಮಾಲತಿ ಶೆಟ್ಟಿ, ತಾ.ಪಂ. ಸದಸ್ಯೆ ಶಿಲ್ಪಾ ರವೀಂದ್ರ ಕೋಟ್ಯಾನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ದೈಹಿಕ ಶಿಕ್ಷಣ ಉಪ ನಿರ್ದೇಶಕ ಮಧುಕರ್, ಕಾರ್ಕಳ ತಾಲೂಕು ಕ್ರೀಡಾಧಿಕಾರಿ ಪೆಡ್ರಿಕ್, ಕುಂದಾಪುರ ತಾ. ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ನವಚೇತನ ಯುವಕ ಮಂಡಲದ ಅಧ್ಯಕ್ಷ ಗಿರೀಶ್ ಕುಮಾರ್, ಯುವತಿ ಮಂಡಲದ ಅಧ್ಯಕ್ಷೆ ಶಾರದಾ ಉಮೇಶ್ ಮುಂತಾದವರು ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು,ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.

 

Comments are closed.