ಕರಾವಳಿ

ಫರಂಗಿಪೇಟೆಯಿಂದ ಆರಂಭಗೊಂಡು ಮಾಣಿಯಲ್ಲಿ ಸಮಾಪನಗೊಂಡ ‘ಸಾಮರಸ್ಯ ನಡಿಗೆ’ :ಜಿಲ್ಲೆಯ ಸಾಮರಸ್ಯಕ್ಕೆ ಕೆಲವರಿಂದ ಧಕ್ಕೆ – ಸಚಿವ ರೈ ಆರೋಪ

Pinterest LinkedIn Tumblr

ಬಂಟ್ವಾಳ, ಡಿಸೆಂಬರ್.12: ಜಾತ್ಯತೀತ ಪಕ್ಷ, ಸಂಘಟನೆಗಳ ಸಹಭಾಗಿತ್ವದಲ್ಲಿ ಸಮಾಜದಲ್ಲಿ ಸಾಮರಸ್ಯಕ್ಕೆ ಧಕ್ಕೆ ಯಾಗುವ ಘಟನೆಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ‘ಸಾಮರಸ್ಯ ನಡಿಗೆ ಸೌಹಾದತೆಯೆಡೆಗೆ’ ಕಾಲ್ನಡಿಗೆ ಜಾಥಾ ಇಂದು ಫರಂಗಿಪೇಟೆಯಿಂದ ಆರಂಭಗೊಂಡಿತು.

ಖ್ಯಾತ ಚಲನ ಚಿತ್ರನಟ ಪ್ರಕಾಶ್ ರೈ, ಮಾಜಿ ಸಚಿವ ಅಮರನಾಥ ಶೆಟ್ಟಿ ಸೇರಿದಂತೆ ವಿವಿಧ ಪಕ್ಷ, ಸಂಘಟನೆಗಳ ಮುಖಂಡರು, ನಾಯಕರ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬಲೂನುಗಳನ್ನು ಹಾರಿಸುವ ಮೂಲಕ ನಡಿಗೆಗೆ ಚಾಲನೆ ನೀಡಿದರು.

ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಾತ್ಯತೀತ ನಿಲುವಿನ ಎಲ್ಲಾ ಪಕ್ಷ,ಸಂಘಟನೆಗಳು ಹಾಗೂ ಸಾರ್ವಜನಿಕರೊಂದಿಗೆ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಹೆಚ್ಚು ವಿದ್ಯಾವಂತರ,ಬುದ್ಧಿವಂತರ ಜಿಲ್ಲೆ ಎಂಬ ಖ್ಯಾತಿ ಪಡೆದಿದ್ದರೂ ಸಮಾಜದಲ್ಲಿ ಸಾಮರಸ್ಯಕ್ಕೆ ಧಕ್ಕೆ ಯಾಗುವ ಘಟನೆಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಸಮಾನ ಮನಸ್ಕರು ಸೇರಿ ಈ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ.

ಜಿಲ್ಲೆಯ ಸಾಮರಸ್ಯಕ್ಕೆ ಕೆಲವರು ಧಕ್ಕೆಯುಂಟು ಮಾಡುತ್ತಿದ್ದಾರೆ. ಆದರೆ, ಶಾಂತಿಯನ್ನು ಕಾಪಾಡುವುದು ಜಾಥಾದ ಉದ್ದೇಶ. ಮಾಣಿಯವರೆಗೆ ಮಾತ್ರವಲ್ಲ, ಜೀವನ ಪರ್ಯಂತ ಜತೆಯಾಗಿ ನಡೆಯೋಣ. ಜನರಿಗೆ, ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಜಾಥಾ ಸಾಗಲಿ ಎಂದರು.

ಸಚಿವ ಯು.ಟಿ.ಖಾದರ್, ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೋಬೊ, ಕೆ.ಅಭಯಚಂದ್ರ ಜೈನ್, ವಸಂತ ಬಂಗೇರ, ಶಕುಂತಳಾ ಶೆಟ್ಟಿ, ಮಾಜಿ ಸಂಸದ ಇಬ್ರಾಹೀಂ, ಮಾಜಿ ಶಾಸಕ ಸಿಪಿಎಂ ಮುಖಂಡ ಶ್ರೀರಾಮ ರೆಡ್ಡಿ, ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ ಕಣಚೂರು ಮೋನು, ಸಿಪಿಐ ರಾಜ್ಯ ಕಾರ್ಯದರ್ಶಿ ಸಿದ್ದನಗೌಡ ಪಾಟೀಲ್, ಮುಖಂಡರಾದ ವಿ.ಕೆ.ಕುಕ್ಯಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ಮಮತಾ ಗಟ್ಟಿ, ಪದ್ಮಶೇಖರ ಜೈನ್, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಗೇರು ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಅಕ್ರಮ-ಸಕ್ರಮ ಸಮಿತಿಯ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಜಿ.ಪಂ. ಮಾಜಿ ಸದಸ್ಯ ಉಮರ್ ಫಾರೂಕ್, ಪಿ.ವಿ.ಮೋಹನ್, ಬಿ.ಕೆ.ಇದಿನಬ್ಬ ಕಲ್ಲಡ್ಕ, ವಿವಿಧ ಪಕ್ಷಗಳ ಮುಖಂಡರಾದ ಶೇಖರ್, ಸುನೀಲ್ ಕುಮಾರ್ ಬಜಾಲ್, ರಾಮಣ್ಣ ವಿಟ್ಲ, ಸಂಜೀವ ಬಂಗೇರ, ಬಾಬು ಭಂಡಾರಿ, ಬಿ.ನಾರಾಯಣ, ವಾಸುದೇವ ಬೋಳೂರು, ರಾಜವರ್ಮ ಬಲ್ಲಾಳ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ರೈತ ಸಂಘದ ರವಿಕಿರಣ್ ಪುಣಚ, ಚಂದು ಎಲ್., ಎಂ.ದೇವದಾಸ್, ಶಾಹುಲ್ ಹಮೀದ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ಮಾಣಿಯಲ್ಲಿ ಸಮಾರೋಪ ಸಂಭರಂಭ: ಖ್ಯಾತ ಚಲನ ಚಿತ್ರನಟ ಪ್ರಕಾಶ್ ರೈ ದಿಕ್ಸುಚಿ ಭಾಷಣ

ಫರಂಗಿಪೇಟೆಯಲ್ಲಿ ಆರಂಭವಾದ ಕಾಲ್ನಡಿಗೆ ಜಾಥಾ ಸಂಜೆ ಮಾಣಿಯಲ್ಲಿ ಸಮಾಪನಗೊಂಡಿತ್ತು.

Comments are closed.