ಕರಾವಳಿ

ಸಚಿವ ಎಂ.ಆರ್. ಸೀತಾರಾಮ್‌ರಿಂದ ಪಿಲಿಕುಳ ರಸ್ತೆಯ ಡಾಮರೀಕಣ ಹಾಗೂ ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Pinterest LinkedIn Tumblr

ಮಂಗಳೂರು : ವಾಮಂಜೂರು ಜಂಕ್ಷನ್ನಿಂದ ಪಿಲಿಕುಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಮರೀಕಣ ಹಾಗೂ ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಶಿಲಾನ್ಯಾಸ ನೆರವೇರಿಸಲಾಯಿತು.

ಸುಮಾರು 4.95 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಅಭಿವೃದ್ಧಿ ಕಾಮಗಾರಿಗೆ ಯೋಜನೆ, ಸಾಂಖ್ಯಿಕ, ವಿಜ್ಞಾನ, ತಂತ್ರಜ್ಞಾನ ಸಚಿವ ಸಚಿವ ಎಂ.ಆರ್. ಸೀತಾರಾಮ್ ಶಿಲಾನ್ಯಾಸಗೈದರು.

ಕಾರ್ಯಕ್ರಮದಲ್ಲಿ ಶಾಸಕರಾದ ಜೆ.ಆರ್.ಲೋಬೊ, ಬಿ.ಎ.ಮೊಯ್ದಿನ್ ಬಾವಾ, ಮೇಯರ್ ಕವಿತಾ ಸನಿಲ್, ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಜಿಪಂ ಸದಸ್ಯ ಇಬ್ರಾಹೀಂ ಅಡ್ಡೂರು, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ. ಸುಧೀರ್, ಬಜ್ಪೆ ಗ್ರಾಪಂ ಮಾಜಿ ಅಧ್ಯಕ್ಷ ಶಾಹುಲ್ ಹಮೀದ್ ಮತ್ತಿತರರು ಉಪಸ್ಥಿತರಿದ್ದರು.

Comments are closed.