
ವೀರ ಕಂಬದ ಕೇಶವ
ಬಂಟ್ವಾಳ, ಡಿಸೆಂಬರ್. 27: ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಅರೋಪಿ ಕೇಶವ ಎಂಬವರ ಮೇಲೆ ಮಂಗಳವಾರ ಸಂಜೆ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಲ್ಲಡ್ಕ ನಿವಾಸಿ ಖಲೀಲ್ ಎಂದು ಗುರುತಿಸಲಾಗಿದೆ. ಕಲ್ಲಡ್ಕದಲ್ಲಿ ಮಂಗಳವಾರ ರಾತ್ರಿ ಜಲೀಲ್ ಕರೋಪಾಡಿ ಕೊಲೆ ಆರೋಪಿ ವೀರ ಕಂಬದ ಕೇಶವ ಎಂಬವರ ಮೇಲೆ ಬೈಕ್ ನಲ್ಲಿ ಬಂದ ಹೆಲ್ಮೇಟ್ ದಾರಿ ಆರೋಪಿಗಳು ಯದ್ವತದ್ವ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದರು. .
ಕರೋಪಾಡಿ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರಾಗಿದ್ದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಅರೋಪಿಗಳ ಪೈಕಿ ಓರ್ವನಾದ ವೀರ ಕಂಬದ ಕೇಶವ ಮಂಗಳವಾರ ರಾತ್ರಿ ಮನೆಯಿಂದ ತನ್ನ ದ್ವಿಚಕ್ರ ವಾಹನದಲ್ಲಿ ಕಲ್ಲಡ್ಕಕ್ಕೆ ಆಗಮಿಸಿ ಅಂಗಡಿಯೊಂದರ ಸಮೀಪ ನಿಂತಿದ್ದ ಸಂದರ್ಭ ಹೆಲ್ಮೆಟ್ ಧರಿಸಿದ್ದ ತಂಡವೊಂದು ಈತನ ಮೇಲೆ ದಾಳಿ ನಡೆಸಿ, ತಲವಾರು ದಾಳಿ ನಡೆಸಿ ಪರಾರಿಯಾಗಿತ್ತು.
ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಕೇಶವರನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದ್ದು, ಗಾಯಾಳು ಇದೀಗ ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳದಲ್ಲಿ ಬಿಗೀ ಪೊಲೀಸ್ ಬಂದೋಬಸ್ತ್ : ಕಲ್ಲಡ್ಕ ಶಾಂತ
ಚೂರಿ ಇರಿತ ಘಟನೆಯಿಂದ ಸ್ಥಳದಲ್ಲಿ ಆತಂಕದ ಸ್ಥಿತಿ ಉಂಟಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮುಂಜಾಗ್ರತ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ಕರೆಸಿ, ಕಲ್ಲಡ್ಕ, ವಿಟ್ಲದಾದ್ಯಂತ ಬಿಗು ಬಂದೋಬಸ್ತು ಏರ್ಪಡಿಸಲಾಗಿತ್ತು. ಇದೀಗ ಕಲ್ಲಡ್ಕ ಪೊಲೀಸರ ನಿಯಂತ್ರಣದಲ್ಲಿದ್ದು, ಶಾಂತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Comments are closed.