ಕರಾವಳಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ

Pinterest LinkedIn Tumblr

ಮಂಗಳೂರು, ಜನವರಿ.4: ಕಾಟಿಪಳ್ಳದ ಕೈಕಂಬದಲ್ಲಿ ಬುಧವಾರ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್‌ ರಾವ್‌ ಮೃತದೇಹವನ್ನು ಸ್ವೀಕರಿಸಿಲು ಫೋಷಕರು ನಿರಾಕರಿಸಿ, ಮೃತದೇಹವನ್ನು ಸ್ವೀಕರಿಸುವ ಮೊದಲು ಗೃಹ ಸಚಿವರು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್

ಪೊಲೀಸರು ಗೌಪ್ಯವಾಗಿ ಶವವನ್ನು ಆಸ್ಪತ್ರೆಯಿಂದ ಮನೆಗೆ ರವಾನಿಸಿದ ಹಿನ್ನೆಲೆಯಲ್ಲಿ ದೀಪಕ್ ಕುಟುಂಬ ಸದಸ್ಯರು ಹಾಗೂ ಕಾಟಿಪಳ್ಳ ಗ್ರಾಮಸ್ಥರ ಮತ್ತು ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ ಎಲ್ಲರ ಜೊತೆ ಮಾತು ಕತೆ ನಡೆಸಿ ಮನವೊಲಿಸಲು ಯಶಸ್ವಿಯಾದ ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ವತಿಯಿಂದ 5 ಲಕ್ಷ ರೂ. ಪರಿಹಾರದ ಘೋಷಣೆ ಮಾಡಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂ. ಪರಿಹಾರವನ್ನು ಸರಕಾರ ಘೋಷಿಸಿದೆ ಎಂದು ತಿಳಿಸಿದರು.

ಆದರೆ, ಈಗಾಗಲೇ ಅಲ್ಲಿ ಸೇರಿರುವ ಬಿಜೆಪಿ ಮುಖಂಡರ ಸಹಿತ ಸಂಘಪರಿವಾರದ ಕಾರ್ಯಕರ್ತರು 50 ಲಕ್ಷ ರೂ. ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ಇದೀಗ ಜಿಲ್ಲಾಧಿಕಾರಿ ಘೋಷಣೆ ಮಾಡಿರುವ 5 ಲಕ್ಷ ರೂ. ಪರಿಹಾರವನ್ನು ಪಡೆಯಲು ದೀಪಕ್ ಕುಟುಂಬ ನಿರಾಕರಿಸುತ್ತಿದೆ ಎಂದು ಹೇಳಲಾಗಿದೆ.

Comments are closed.