
ಹೊಸದಿಲ್ಲಿ : ಮಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕಾಟಿಪಳ್ಳದ ದೀಪಕ್ ರಾವ್ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕದ ಸಂಸದರ ನಿಯೋಗವು ಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ನಿಯೋಗದಲ್ಲಿ ಸಂಸದರಾದ ಪ್ರಹ್ಲಾದ್ ಜೋಶಿ, ನಳಿನ್ ಕುಮಾರ್ ಕಟೀಲ್, ಜಿ.ಎಂ ಸಿದ್ದೇಶ್, ಪಿ.ಸಿ ಮೋಹನ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮೊದಲಾದವರು ಪಾಲ್ಗೊಂಡಿದ್ದರು.

ಸಂಸದರಿಂದ ಅಂತಿಮ ನಮನ:

ಮಂಗಳೂರು : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ವಿಷಯ ತಿಳಿದ ತಕ್ಷಣ ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶದ ನಡುವೆಯೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ಬೆಳಿಗ್ಗೆ ಮಂಗಳೂರು ತಲುಪಿ ಬೆಳಿಗ್ಗೆ 7.00 ಗಂಟೆಗೆ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿ ದೀಪಕ್ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಿದರು.
Comments are closed.