ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಜ.8 (ನಾಳೆ) ಸಿಎಂ ಪ್ರವಾಸ- ವಿವಿದೆಡೆ ಮದ್ಯ ನಿಷೇಧ

Pinterest LinkedIn Tumblr

ಉಡುಪಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನವರಿ 8 ರಂದು ಉಡುಪಿ ಜಿಲ್ಲೆಗೆ ಆಗಮಿಸಿ, ಬೈಂದೂರು, ಬ್ರಹ್ಮಾವರ ಮತ್ತು ಕಾಪುವಿನಲ್ಲಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ , ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ , ಬೈಂದೂರು ಕಾರ್ಯಕ್ರಮ ವ್ಯಾಪ್ತಿಯ ಅರೆ ಶಿರೂರು, ಶಿರೂರು ಮತ್ತು ಯಡ್ತರೆ ಗ್ರಾಮ, ಬ್ರಹ್ಮಾವರದ ಉಪ್ಪೂರು ಮತ್ತು ವಾರಂಬಳ್ಳಿ ಗ್ರಾಮ ಹಾಗೂ ಕಾಪು ಠಾಣಾ ವ್ಯಾಪ್ತಿಯ ಮಜೂರು, ಮಲ್ಲಾರು, ಕಾಪು, ಪಡು , ಮೂಳೂರು ಮತ್ತು ಉಳಿಯಾರಗೋಳಿ ವ್ಯಾಪ್ತಿಯಲ್ಲಿ ಬರುವ , ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳ ಮದ್ಯ ಮಾರಾಟವನ್ನು 8-01-2018 ರ ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ಮುಚ್ಚಲು ಆದೇಶಿಸಿ, ಈ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ (ಡೈ ಡೇಸ್) ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ , ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.

Comments are closed.