ಕರಾವಳಿ

ಆಸ್ಪತ್ರೆಯಿಂದ ಮನೆಗೆ ತಲುಪಿದ ಬಶೀರ್ ಮೃತದೇಹ : ಮನೆಯಲ್ಲಿ ಮಹಿಳೆಯರಿಗೆ ಮಾತ್ರ ಅಂತಿಮ ದರ್ಶನಕ್ಕೆ ಅವಕಾಶ

Pinterest LinkedIn Tumblr

ಮಂಗಳೂರು, ಜನವರಿ.7: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾಗಿರುವ ಬಶೀರ್(47) ಮೃತದೇಹವನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಯಿಂದ ಅಪರಾಹ್ನ 2:15ರ ಸುಮಾರಿಗೆ ಆಕಾಶಭವನದಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಯಿತು.

ಆಕಾಶ ಭವನದಲ್ಲಿರುವ ಬಶೀರ್ ಅವರ ನಿವಾಸಕ್ಕೆ ಮೃತದೇಹವನ್ನು ಹೊತ್ತ ಆಯಂಬುಲೆನ್ಸ್ ಮಧ್ಯಾನ ಮನೆಗೆ ತಲುಪಿದ್ದು, ಅಲ್ಲಿ ಮಹಿಳೆಯರಿಗೆ ಮೃತದೇಹದ ಅಂತಿಮ ದರ್ಶನದ ವ್ಯವಸ್ಥೆ ಕಲ್ಪಿಸಲಾಯಿತು. ಬಳಿಕ ಮೃತದೇಹವನ್ನು ಕೂಳೂರು-ಪಂಜಿಮೊಗರುವಿನ ಮುಹಿಯುದ್ದೀನ್ ಜುಮಾ ಮಸೀದಿಗೆ ಕೊಂಡೊಯ್ಯಲಾಯಿತು. ಅಲ್ಲಿ ಪುರುಷರಿಗೆಲ್ಲ ಮೃತದೇಹದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಆ ಬಳಿಕ ಮಸೀದಿ ವಠಾರದಲ್ಲಿ ದಫನ ಕಾರ್ಯ ನೆರವೇರಲಿದೆ.

”ಬಶೀರ್ ಅವರ ಮೃತದೇಹದ ಯಾವುದೇ ಮೆರವಣಿಗೆ ನಡೆಸುವುದಿಲ್ಲ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಆಕಾಶಭವನದಲ್ಲಿರುವ ಬಶೀರ್ ಅವರ ಮನೆಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ಮಹಿಳೆಯರಿಗೆ ಮಾತ್ರ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಮೃತದೇಹವನ್ನು ಕೂಳೂರು- ಪಂಜಿಮೊಗರಿನಲ್ಲಿರುವ ಮುಹಿಯುದ್ದೀನ್ ಜುಮಾ ಮಸೀದಿಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ಎಲ್ಲಾ ಪುರುಷರಿಗೆ ಬಶೀರ್ ಅವರ ಮೃತದೇಹದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಈ ನಡುವೆ ಯಾವುದೇ ರೀತಿಯಲ್ಲಿ ಶಾಂತಿ ಕದಡಲು ಯಾರೂ ಪ್ರಯತ್ನಿಸಬಾರದು. ಬಶೀರ್ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸುವಂತೆ ಬಶೀರ್ ಅವರ ಸಹೋದರ ಹಕೀಂ ಕೂಳೂರು ಭಾವುಕರಾಗಿ ಮನವಿ ಮಾಡಿದ್ದಾರೆ

ಈ ನಡುವೆ ಬಶೀರ್ ಅವರ 2ನೇ ಪುತ್ರ ಇರ್ಶಾನ್ ಮಧ್ಯಾಹ್ನ ವೇಳೆ ಅಬುಧಾಬಿಯಿಂದ ಹೊರಟಿದ್ದಾರೆ. ಸ್ಪೈಸ್ ಜೆಟ್ ವಿಮಾನದಲ್ಲಿ ಅಬುಧಾಭಿಯ ಕಾಲಮಾನ 12:50ಕ್ಕೆ ಹೊರಟಿರುವ ಅವರು, 5:05ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದಾರೆ. 5:45ರ ಸುಮಾರಿಗೆ ಮನೆ ಸೇರಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Comments are closed.