ಕರಾವಳಿ

ಮುಖ್ಯಮಂತ್ರಿ ಪ್ರವಾಸ: ಉಡುಪಿಯಲ್ಲಿ ಉಸ್ತುವಾರಿ ಸಚಿವರಿಂದ ಅಧಿಕಾರಿಗಳ ಸಭೆ

Pinterest LinkedIn Tumblr

ಉಡುಪಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನವರಿ 8 ರಂದು ಉಡುಪಿ ಜಿಲ್ಲೆಗೆ ಅಗಮಿಸಿ, ಬೈಂದೂರು, ಬ್ರಹ್ಮಾವರ ಮತ್ತು ಕಾಪುವಿನಲ್ಲಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ , ಮೀನುಗಾರಿಕೆ, ಯುವ ಜನಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಅವರ ಅಧ್ಯಕ್ಷತೆಯಲ್ಲಿ , ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಸಭೆ ನಡೆಯಿತು.

ಸಭೆಯಲ್ಲಿ, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಕುರಿತು ಹಾಗೂ ಪ್ರತಿ ಕ್ಷಣದ ಕಾರ್ಯಕ್ರಮ ವರದಿ ತಯಾರಿಸಲು ಹಾಗೂ ಸಂವಹನ ಕೊರತೆಯಿಂದ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಸಚಿವರು ಸಲಹೆ ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.