
ಮಂಗಳೂರು, ಜನವರಿ. 8: ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಅವರ ಮನೆಗೆ ಭಾನುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ಅವರು ಬಾನುವಾರ ಸುರತ್ಕಲ್ ಕಾಟಿಪಳ್ಳದಲ್ಲಿರುವ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಸಂಜೆ ವೇಳೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದರು.

ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್
ದೀಪಕ್ ಸಹೋದರನಿಗೆ ಎಂ.ಆರ್.ಪಿ.ಎಲ್. ನಲ್ಲಿ ಕೆಲಸ ನೀಡುವಂತೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಸಂದರ್ಭ ಸಿ.ಎಂ ಅವರೊಂದಿಗೆ ಸಚಿವರಾದ ರಮನಾಥ್ ರೈ, ಯು.ಟಿ ಖಾದರ್, ಮಂಗಳೂರು ಮೇಯರ್ ಕವಿತಾ ಸನಿಲ್ ಹಾಗೂ ಇನ್ನಿತರ ಮುಖಂಡರು ದೀಪಕ್ ಮನೆಗೆ ಭೇಟಿ ನೀಡಿದರು.
ಜನವರಿ 3 ರಂದು ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ದೀಪಕ್ ರಾವ್ ಹತ್ಯೆಗೀಡಾಗಿದ್ದರು.
Comments are closed.