ಕರಾವಳಿ

ಸಿ.ಎಂ ಸಿದ್ದರಾಮಾಯ್ಯರ ಹೇಳಿಕೆ ಖಂಡಿಸಿ ಬಿಜೆಪಿ ಹಾಗೂ ಸಂಘ ಪರಿವಾರದಿಂದ ಪ್ರತಿಭಟನೆ – ಬಂಧನ

Pinterest LinkedIn Tumblr

ಮಂಗಳೂರು, ಜನವರಿ.12 : ಬಿಜೆಪಿ ಹಾಗೂ ಆರ್ ಎಸ್ ಎಸ್ ಮುಖಂಡರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಾಯ್ಯ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಹಾಗೂ ಸಂಘಪರಿವಾರದ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಬಿಜೆಪಿ ಹಾಗೂ ಆರ್ ಎಸ್ ಎಸ್ ಮುಖಂಡರು ಭಯೋತ್ಪಾದಕರು ಎಂಬ ಮುಖ್ಯಮಂತ್ರಿ ಸಿದ್ದರಾಮಾಯ್ಯ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರು ನಗರದ ಮಲ್ಲಿಕಟ್ಟೆ ಬಳಿಯಿರುವ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಇಂದು ನಗರಕ್ಕೆ ಗೃಹ ಸಚಿವ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿದ್ದು, ಅವರು ಕೂಡ ಸಿಎಂ ಅವರ ಹೇಳಿಕೆಯನ್ನು ಸಮರ್ಥಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಪ್ರತಿಭಟನೆಕಾರರು ಮುಖ್ಯಮಂತ್ರಿ ಸಿದ್ದರಾಮಾಯ್ಯ ಅವರ ಹೇಳಿಕೆಯನ್ನು ವಿರೋಧಿಸಿ ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಪ್ರತಿಭಟನಕಾರರನ್ನು ಬರ್ಕೆ ಹಾಗೂ ಬಂದರು ಪೊಲೀಸರು ಸೆಕ್ಷನ್ 71ರ ಅಡಿಯಲ್ಲಿ ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಬಿಜೆಪಿ ಮುಖಂಡರಾದ ಮೋನಪ್ಪ ಭಂಡಾರಿ, ವೇದವ್ಯಾಸ ಕಾಮತ್, ಕ್ಯಾಪ್ಟನ್ ಬ್ರಿಜೇಶ್ ಚೌಟ, ಗಣೇಶ್ ಹೊಸಬೆಟ್ಟು, ರೂಪಾ ಡಿ ಬಂಗೇರ, ಯೋಗೀಶ್ ಭಟ್, ಸಂತೋಷ್ ಕುಮಾರ್, ಸತ್ಯಜಿತ್ ಸುರತ್ಕಲ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹೆಚ್ಚಿನ ವಿವರ ನಿರೀಕ್ಷಿಸಿ..

Comments are closed.