ಕರಾವಳಿ

ದೀಪಕ್ ರಾವ್ ಕೊಲೆ ಪ್ರಕರಣ : ಮತ್ತೆ ಇಬ್ಬರು ಪೊಲೀಸ್ ವಶ – ಕಾರ್ಯಾಚರಣೆಗೆ ವಿಶೇಷ ತಂಡ ರಚನೆ

Pinterest LinkedIn Tumblr

ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್

ಮಂಗಳೂರು, ಜನವರಿ. 16: ಜನವರಿ 3ರಂದು ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪಣಂಬೂರು ಪೊಲೀಸ್ ಠಾಣಾ ನಿರೀಕ್ಷಕ ರಫೀಕ್ ಮತ್ತು ಸಿಬ್ಬಂದಿ ಹಾಗೂ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶಾಂತರಾಂ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂಲತಃ ಕಾಟಿಪಳ್ಳ 2ನೆ ಬ್ಲಾಕ್ನ ನಿವಾಸಿ ಪ್ರಸ್ತುತ ಕೃಷ್ಣಾಪುರ 6ನೆ ಬ್ಲಾಕ್ನಲ್ಲಿ ವಾಸವಾಗಿರುವ ಅಬ್ದುಲ್ ಅಝೀಮ್ ಯಾನೆ ಅಝೀಮ್ (34) ಹಾಗೂ ಕಾಟಿಪಳ್ಳ 2ನೆ ಬ್ಲಾಕ್ ನಿವಾಸಿ ಅಬ್ದುಲ್ ಅಝೀಝ್ ಯಾನೆ ಅಝೀಝ್ (42) ಎಂಬವರನ್ನು ಬಂಧಿಸಿದ್ದಾರೆ.

ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹತ್ಯೆ ನಡೆದ ದಿನದಂದೇ ನಾಲ್ಕು ಮಂದಿ ಆರೋಪಿಗಳನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತಿಬ್ಬರ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಆರಕ್ಕೇರಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಈ ಮೊದಲು ಬಂಧಿಸಲಾದ ನಾಲ್ವರು ಆರೋಪಿಗಳಲ್ಲಿ ಕಿನ್ನಿಗೋಳಿಯ ಮುಹಮ್ಮದ್ ನೌಷಾದ್ (22), ಕೃಷ್ಣಾಪುರ 4ನೆ ಬ್ಲಾಕ್ನ ಮುಹಮ್ಮದ್ ಇರ್ಷಾನ್ ಯಾನೆ ಇರ್ಶಾ (21) ಎಂಬವರನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಲ್ಲಿದ್ದಾರೆ.
ಆರೋಪಿಗಳಾದ ಕೃಷ್ಣಾಪುರ 7ನೆ ಬ್ಲಾಕ್ನ ಮುಹಮ್ಮದ್ ನವಾಝ್ ಯಾನೆ ಪಿಂಕಿ ನವಾಝ್ (23), ಕೃಷ್ಣಾಪುರ 4ನೆ ಬ್ಲಾಕ್ನ ರಿಝ್ವಾನ್ ಯಾನೆ ಇಜ್ಜು ಯಾನೆ ರಿಜ್ಜು (24) ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೀಪಕ್ ಹತ್ಯೆ ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಆರೋಪಿಗಳು ಒಳಗೊಂಡಿದ್ದಾರೆ ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಆರೋಪಿಗಳ ಪತ್ತೆ ಕಾರ್ಯಾಚರಣೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.

ಜ.3ರಂದು ಮಧ್ಯಾಹ್ನ 1:15ಕ್ಕೆ ಕಾಟಿಪಳ್ಳ 2ನೆ ಬ್ಲಾಕ್ನ ಅಬ್ದುಲ್ ಮಜೀದ್ ಅವರ ಮೊಬೈಲ್ ಕರೆನ್ಸಿಯ ಹಣವನ್ನು ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ದೀಪಕ್ ರಾವ್ (30)ರನ್ನು ಮಜೀದ್ ಅವರ ಮನೆಯ ಎದುರೇ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ಕು ಮಂದಿ ಏಕಾಏಕಿ ಕಾರಿನಿಂದ ದೀಪಕ್ರ ಬೈಕ್ನ್ನು ಅಡ್ಡಗಟ್ಟಿ ಮಾರಕಾಯುಧಗಳಿಂದ ಗಂಭೀರ ಹಲ್ಲೆ ನಡೆಸಿದ್ದರು. ಬಳಿಕ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Comments are closed.