ಕರಾವಳಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಹಾಗೂ ಅಬ್ದುಲ್ ಬಶೀರ್ ಮನೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ

Pinterest LinkedIn Tumblr

ಮಂಗಳೂರು, ಜನವರಿ. 22: ಭಾರತದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಅವರ ಕಾಟಿಪಳ್ಳದ ಮನೆಗೆ ಹಾಗೂ ಕೊಟ್ಟಾರ ಬಳಿ ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಆಕಾಶಭವನದ ಅಬ್ದುಲ್ ಬಶೀರ್ ಅವರ ಮನೆಗಳಿಗೆ ರವಿವಾರ ಭೇಟಿ ನೀಡಿದರು.

ಈ ವೇಳೆ ದೀಪಕ್ ಹಾಗೂ ಬಶೀರ್ ಅವರ ಕುಟುಂಬದ ಸದ್ಯದ ಸ್ಥಿತಿಯ ಬಗ್ಗೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್ ಅವರಿಂದ ಮಾಹಿತಿ ಪಡೆದುಕೊಂಡ ದೇವೇಗೌಡರು ದೀಪಕ್ ಅವರ ತಾಯಿ ಹಾಗೂ ಬಶೀರ್ ಅವರ ಕುಟುಂಬಗಳಿಗೆ ಸಾಂತ್ವನ ಹೇಳಿ ಸಮಾಧಾನದ ಪಡಿಸಿದರು.

ಈ ವೇಳೆ ಜೆಡಿಎಸ್ ದೇವೇಗೌಡರೊಂದಿಗೆ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್, ರಾಜ್ಯ ಕಾರ್ಯದರ್ಶಿ ಅಬ್ದುಲ್ ರವೂಫ್ ಪುತ್ತಿಗೆ, ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ, ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಎಂ.ಕೆ. ಅಬ್ದುಲ್ ಖಾದರ್, ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ಜಿಲ್ಲಾ ಉಪಾಧ್ಯಕ್ಷ ರಘುನಾಥ್ ಪೈ, ಕಾರ್ಯಾಧ್ಯಕ್ಷ ರಾಮ ಗಣೇಶ್, ಯುವ ಜನತಾದಳ ದ.ಕ. ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಡಿ.ಪಿ.ಹಮ್ಮಬ್ಬ, ಉಪೇಂದ್ರ ನಾಯಕ್, ಜಾಫರ್, ಮುಮ್ತಾಝ್ ಅಲಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ವಸಂತ ಪೂಜಾರಿ ಮೊದಲಾದವರು ದೀಪಕ್ ಹಾಗೂ ಬಶೀರ್ ಅವರ ಮನೆಗಳಿಗೆ ಭೇಟಿ ನೀಡಿದರು.

Comments are closed.