
ಮಂಗಳೂರು, ಜನವರಿ.22: ಕರಾವಳಿ ತಟ ರಕ್ಷಣಾ ಪಡೆಯ ಸಿಬ್ಬಂದಿಗಳು ದೋಣಿಯಲ್ಲಿ ಅಪಾಯಕ್ಕೆ ಸಿಲುಕಿದ್ದ 10 ಮಂದಿ ಮೀನುಗಾರರನ್ನು ರಕ್ಷಿಸಿದ ಘಟನೆ ರವಿವಾರ ನಡೆದಿದ್ದು, ಇಂದು ಮಧ್ಯಾಹ್ನ 12.35ರ ಹೊತ್ತಿಗೆ ದೋಣಿ ಹಾಗೂ ಅದರಲ್ಲಿದ್ದ 10 ಮಂದಿ ಮೀನುಗಾರರನ್ನು ಕರಾವಳಿ ತಟ ರಕ್ಷಣಾ ಪಡೆಯು ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕರಿಗೆ ಒಪ್ಪಿಸಿದೆ.
ಮಲ್ಪೆಯ ಪಶ್ಚಿಮಕ್ಕೆ 100 ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದ್ದು, ಅಪಾಯಕ್ಕೆ ಸಿಲುಕಿದ್ದ ಕೇರಳದ ಕಣ್ಣೂರಿನ 10 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಜನವರಿ 20ರಂದು ಸಮುದ್ರ ಮದ್ಯೆ ಮೀನುಗಾರಿಕಾ ದೋಣಿಯಲ್ಲಿ ಯಾಂತ್ರಿಕ ತೊಂದರೆ ಕಾಣಿಸಿಕೊಂಡು ದೋಣಿಯೊಳಕ್ಕೆ ನೀರು ನುಗ್ಗಲಾರಂಭಿಸಿ ಅಪಾಯಕ್ಕೆ ಸಿಲುಕಿತ್ತು. ಭಾರತೀಯ ತಟ ರಕ್ಷಣಾ ಪಡೆಯ ಮಂಗಳೂರು ಕೇಂದ್ರಕ್ಕೆ ಈ ಬಗ್ಗೆ ಸಂದೇಶ ರವಾನೆಯಾದ ಹಿನ್ನೆಲೆಯಲ್ಲಿ ತಟ ರಕ್ಷಣಾ ಪಡೆಯ ಐಸಿಜಿ ಸಮರ್ ತಕ್ಷಣ ನೆರವಿಗೆ ಧಾವಿಸಿತು.

21ರಂದು ರಾತ್ರಿ 9.20ರ ವೇಳೆಗೆ ದೋಣಿಯನ್ನು ಮೀನುಗಾರಿಕಾ ದೋಣಿಯನ್ನು ಪತ್ತೆ ಹಚ್ಚಿ, ದೋಣಿಯ ಯಾಂತ್ರಿಕ ತೊಂದರೆಯನ್ನು ಸರಿಪಡಿಸಿ ದೋಣಿಯೊಳಗೆ ನುಗ್ಗಿದ್ದ ನೀರನ್ನು ತೆರವುಗೊಳಿಸುವಲ್ಲಿ ಕರಾವಳಿ ತಟ ರಕ್ಷಣಾ ಪಡೆಯ ಸಿಬ್ಬಂದಿಗಳು ಸಹಕರಿಸಿದರು.
ಮೀನುಗಾರರಲ್ಲಿ ಅಪಾಯದಿಂದ ರಕ್ಷಿಸುವಲ್ಲಿ ಯಶಸ್ವಿ ಕಾರ್ಯಾಚರಣೆ ಬಳಿಕ ಕರಾವಳಿ ತಟ ರಕ್ಷಣಾ ಪಡೆಯ ಕಮಾಂಡರ್ ಎಸ್.ಎಸ್. ದಾಸಿಲಾರವರು, ಮೀನುಗಾರಿಕೆಗೆ ತೆರಳುವ ದೋಣಿಗಳನ್ನು ಸಂಬಧಪಟ್ಟ ದೋಣಿ ಮಾಲಕರು ಸುಸ್ಥಿತಯಲ್ಲಿಡದೆ, ಮೀನುಗಾರರ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದಾಗಿ ಆಕ್ಷೇಪಿಸಿದ್ದಾರೆ. ಈ ಬಗ್ಗೆ ರಾಜ್ಯ ಮತ್ತ್ತು ಜಿಲ್ಲಾ ಆಡಳಿತದ ಗಮನ ಸೆಳೆಯುವುದಾಗಿ ಅವರು ತಿಳಿಸಿದ್ದಾರೆ.
Comments are closed.