ಉಡುಪಿ: ಮಣಿಪಾಲ ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಡಿಪಾರ್ಟಮೆಂಟ್‌ನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡು ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಗ್ರೀನ್‌ವುಡ್ ಅಪಾರ್ಟ್‌ಮೆಂಟ್‌ನಲ್ಲಿ ವಾಸಮಾಡುತ್ತಿದ್ದ ಮೊಹಮ್ಮದ್ ಶರೀಫ್ ಎಂಬವರ ಪತ್ನಿ ಸಾರಾ ಸದಾಫ್(26ವ) ಇವರು ಜನವರಿ 18 ರಿಂದ ಕಾಣೆಯಾಗಿರುತ್ತಾರೆ.

ಇವರು ಗೋಧಿ ಮೈಬಣ್ಣ ಹೊಂದಿದ್ದು, ಕೋಲು ಮುಖ, ಸಾಧಾರಣ ಮೈಕಟ್ಟು, ಎತ್ತರ 5 ಅಡಿ ಇದ್ದು, ಇಂಗ್ಲೀಷ್,ಹಿಂದಿ, ತೆಲುಗು ಭಾಷೆಯನ್ನು ಮಾತನಾಡುತ್ತಾರೆ. ಎಡಭಾಗದ ತುಟಿಯ ಮೇಲೆ ಸಣ್ಣ ಮಚ್ಚೆ ಮಚ್ಚೆ ಇದ್ದು, ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಮತ್ತು ಟಿ ಶರ್ಟ್ ಧರಿಸಿರುತ್ತಾರೆ. ಈ ವ್ಯಕ್ತಿ ಪತ್ತೆಯಾದಲ್ಲಿ ಮಣಿಪಾಲ ಠಾಣೆ 08202570328, ಅಥವಾ ಪೊಲೀಸ್ ನಿರೀಕ್ಷಕರು ಮಣಿಪಾಲ ಠಾಣೆ 9480805448 ಅಥವಾ ಪೊಲೀಸ್ ಉಪನಿರೀಕ್ಷಕರು ಮಣಿಪಾಲ ಠಾಣೆ 9480805475 ಇವರಿಗೆ ಮಾಹಿತಿ ನೀಡುವಂತೆ ಮಣಿಪಾಲ ಪೊಲೀಸ್ ಠಾಣಾ ಪ್ರಕಟಣೆ ತಿಳಿಸಿದೆ.
Comments are closed.