ಕರಾವಳಿ

ಹಿರಿಯ ಸಮಾಜ ಸೇವಕ,ಧಾರ್ಮಿಕ ಮುಖಂಡ ಹಾಜಿ ಹಮೀದ್ ಕಂದಕ್ ವಿಧಿವಶ

Pinterest LinkedIn Tumblr

ಮಂಗಳೂರು, ಜನವರಿ 24: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಹಿರಿಯ ಸಾಮಾಜಿಕ, ಧಾರ್ಮಿಕ ಮುಂದಾಳು ಮಂಗಳೂರಿನ ಹಾಜಿ ಹಮೀದ್ ಕಂದಕ್ (68) ಅವರು ಹೃದಯಾಘಾತ ಬುಧವಾರ ಸಂಜೆ ನಿಧನರಾಗಿದ್ದಾರೆ.

ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ನಗರದಲ್ಲಿ ಟ್ರಾವೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಹಾಜಿ ಹಮೀದ್ ಕಂದಕ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದರು. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳ ಹಾಗು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಸ್ಥಾಪನೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.

ಇಂದು ನಗರದ ವುಡ್ ಲ್ಯಾಂಡ್ ಹೊಟೇಲ್‌ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಹಮೀದ್ ಕಂದಕ್ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

ಮೃತದೇಹದ ಅಂತಿಮ ದರ್ಶನಕ್ಕಾಗಿ ಕಂಕನಾಡಿ ಸಮೀಪದ ವೆಲೆನ್ಸಿಯಾದ ಅವರ ನಿವಾಸದಲ್ಲಿ ಇರಿಸಲಾಗಿದೆ. ಗುರುವಾರ ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಕೇಂದ್ರ ಜುಮ್ಮಾ ಮಸೀದಿಯ ವಠಾರದಲ್ಲಿ ಅಂತ್ಯ ಸಂಸ್ಕಾರವು ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Comments are closed.