ಕರಾವಳಿ

ಪೊಲೀಸ್ ಇಲಾಖೆಗೆ ಸೇರಲು ಮುಂದೆ ಬರುವ ಎಲ್ಲಾ ಜಿಲ್ಲೆಗಳ ಯುವಕರಿಗೂ ಆದ್ಯತೆ : ಎಡಿಜಿಪಿ ಚರಣ್ ರೆಡ್ಡಿ

Pinterest LinkedIn Tumblr

ಮಂಗಳೂರು, ಜನವರಿ.29: ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ ವತಿಯಿಂದ ಸೋಮವಾರ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ 14ನೇ ತಂಡದ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ತರಬೇತಿ) ಕೆ.ಎಸ್.ಆರ್.ಚರಣ್ ರೆಡ್ಡಿ ಭಾಗವಹಿಸಿದ್ದರು. ಈ ವೇಳೆ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ದ.ಕ. ಮತ್ತು ಉಡುಪಿ ಜಿಲ್ಲೆಯಿಂದ ಪೊಲೀಸ್ ಇಲಾಖೆಗೆ ಸೇರುವ ಯುವಕರ ಸಂಖ್ಯೆ ತೀರಾ ಕಡಿಮೆ ಇದ್ದು, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಯವಕರನ್ನು ಮನವೊಲಿಸುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಪೊಲೀಸ್ ಇಲಾಖೆಯಲ್ಲಿ ಸೇವೆಗೆ ಸೇರ್ಪಡೆಗೊಳ್ಳುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳ ಯುವಕರಿಗೂ ಆದ್ಯತೆ ನೀಡಬೇಕು. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅವರು ದ.ಕ. ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕಳೆದ 8 ತಿಂಗಳಿನಿಂದ ತರಬೇತಿ ಪಡೆದ 95 ಸಿಬ್ಬಂದಿಯಿಂದ ನಿರ್ಗಮನ ಪಥ ಸಂಚಲನ ನಡೆಯಿತು. ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್, ದ.ಕ. ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇ ಗೌಡ, ಡಿಸಿಪಿ ಹನುಮಂತರಾಯ ಮತ್ತಿತ್ತರ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Comments are closed.