ಕರಾವಳಿ

ವಿದ್ಯಾರ್ಥಿನಿಗಳಾದ ಝೈಬುನ್ನಿಸಾ ಹಾಗೂ ರಚನಾಳ ಅಸಹಜ ಸಾವಿನ ಸಮಗ್ರ ತನಿಖೆಗೆ ಆಗ್ರಹ

Pinterest LinkedIn Tumblr

ಮಂಗಳೂರು, ಜನವರಿ.31: ಉಪ್ಪಿನಂಗಡಿಯ ವಿದ್ಯಾರ್ಥಿನಿ ಝೈಬುನ್ನಿಸಾ ಹಾಗೂ ಆಳ್ವಾಸ್ ಕಾಲೇಜಿನ ರಚನಾಳ ಅಸಹಜ ಸಾವಿನ ಸಮಗ್ರ ತನಿಖೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಹಾಗೂ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್(ಎಸ್.ಐ.ಓ.) ವತಿಯಿಂದ ಮಂಗಳವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ವಿದ್ಯಾರ್ಥಿನಿಯರಾದ ಝೈಬುನ್ನಿಸಾ ಹಾಗೂ ರಚನಾಳ ಅಸಹಜ ಸಾವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ ಪ್ರತಿಭಟನಕಾರರು ವಿದ್ಯಾರ್ಥಿನಿಯರಾದ ಝೈಬುನ್ನಿಸಾ ಹಾಗೂ ರಚನಾ ಸಾವಿನ ಪ್ರಕರಣವನ್ನು ಸಿಐಡಿಗೆ ನೀಡುವಂತೆ ಆಗ್ರಹಿಸಿದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಎಡೆಮಾಡಿದೆ. ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯವು ದಿನನಿತ್ಯ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ಅನಿವಾರ್ಯತೆಯಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಠಿಣ ಕಾನೂನು ಕ್ರಮಕೈಗೊಳ್ಳ ಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಘಟಕದ ಕಾರ್ಯದರ್ಶಿ ಫರಾಝ್, ಎಸ್.ಐ.ಓ. ಜಿಲ್ಲಾಧ್ಯಕ್ಷ ತಲ್ಹ ಇಸ್ಮಾಯೀಲ್, ಪತ್ರಕರ್ತ ಎ.ಕೆ.ಕುಕ್ಕಿಲ, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಸದಸ್ಯೆ ರೈಯಾನ ಪಕ್ಕಲಡ್ಕ ಮತ್ತಿತ್ತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Comments are closed.