ಕರಾವಳಿ

ಬಂಟ್ವಾಳ ಸಮೀಪ ಅಕ್ರಮ ಮರಳು ಅಡ್ಡೆಗೆ ದಾಳಿ : ಮರಳು, ದೋಣಿ,ಲಾರಿ ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತು ವಶ

Pinterest LinkedIn Tumblr

ಸಾಂದರ್ಭಿಕ ಚಿತ್ರ

ಬಂಟ್ವಾಳ, ಜನವರಿ. 31: ಬಂಟ್ವಾಳ ಠಾಣಾ ವ್ಯಾಪ್ತಿಯ ವಿವಿಧೆಡೆಗಳ ಅಕ್ರಮ ಮರಳು ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಗಣಿ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ಮಾಡಿದ್ದಾರೆ.

ಬಂಟ್ವಾಳ ಠಾಣಾ ವ್ಯಾಪ್ತಿಯ ಬರಿಮಾರು ಮತ್ತು ಸರಪಾಡಿ ಎಂಬಲ್ಲಿ ನಡೆಯುತ್ತಿದ್ದ ಪ್ರತ್ಯೇಕ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿರುವ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ಮರಳು, ನಾಲ್ಕು ಯಾಂತ್ರೀಕೃತ ದೋಣಿ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಬರಿಮಾರು ಮತ್ತು ಸರಪಾಡಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿಎರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಎಸ್ಪಿ ರವಿಕಾಂತೇ ಗೌಡ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಎಸ್ಸೈ ಪ್ರಸನ್ನ ಅವರ ನೇತೃತ್ವದ ತಂಡ ಈ ದಾಳಿ ನಡೆಸಿದೆ.

ದಾಳಿಯ ವೇಳೆ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ವಾಧೀನಪಡಿಸಿ ಕೊಂಡಿರುವ ಮರಳು, ನಾಲ್ಕು ಯಾಂತ್ರೀಕೃತ ದೋಣಿ ಹಾಗೂ ಒಂದು ಲಾರಿ ಸೇರಿ ಸುಮಾರು 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments are closed.