ಕರಾವಳಿ

ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ದುಬೈ ಯಾನಿ ಸೆರೆ : 39 ಲಕ್ಷ ರೂ. ಮೌಲ್ಯದ ಚಿನ್ನ ವಶ

Pinterest LinkedIn Tumblr

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ )ದ ಅಧಿಕಾರಿಗಳು ಬಂಧಿಸಿದ್ದಾರೆ.

ಅಕ್ರಮವಾಗಿ ಚಿನ್ನ ಸಾಗಿಸಲೆತ್ನಿಸಿದ ಕಾಸರಗೋಡಿನ ಅಹಮದ್ ನಬೀಳ್ ಗಫೂರ್ (21) ನನ್ನು ಬಂಧಿಸಿರುವ ಡಿಆರ್‌ಐ ಅಧಿಕಾರಿಗಳು ಆರೋಪಿಯಿಂದ ಸುಮಾರು 39 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈತ ದುಬೈನಿಂದ ಸ್ಪೈಸ್‌ಜೆಟ್ ವಿಮಾನ ಮೂಲಕ ಬಂದಿದ್ದು, ತಪಾಸಣೆ ವೇಳೆ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಈತ ಮೊಬೈಲ್ ಕವರ್‌ನೊಳಗೆ ಚಿನ್ನವನ್ನು ಅಡಗಿಸಿಟ್ಟು ಪ್ಯಾಂಟಿನ ಜೇಬಿನಲ್ಲಿರಿಸಿ ಸಾಗಿಸಲು ಯತ್ನಿಸಿದ್ದ. 1.282 ಗ್ರಾಂ ತೂಕ ಇರುವ ಚಿನ್ನದ ಒಟ್ಟು 11 ಬಾರ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದರ ಮೌಲ್ಯ 39 ಲಕ್ಷ ರೂ. ಆಗಿದೆ. ನಬೀಲ್ ತನಿಖೆ ನಡೆಯುತ್ತಿದೆ ಎಂದು ಡಿಆರ್‌ಐ ನಿರ್ದೇಶಕ ವಿನಾಯಕ ಭಟ್ ತಿಳಿಸಿದ್ದಾರೆ.

Comments are closed.