ಕರಾವಳಿ

ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಖಂಡಿಸಿ ದಕ್ಷಿಣ ಬಿಜೆಪಿ ಸಮಿತಿಯಿಂದ ಪ್ರತಿಭಟನೆ

Pinterest LinkedIn Tumblr

ಮಂಗಳೂರು, ಫೆಬ್ರವರಿ.3: ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಹಾಗೂ ಮುಖ್ಯಮಂತ್ರಿ ಸಹಿತ ಸಚಿವರು ಅನುಸರಿಸುತ್ತಿರುವ ನಡೆ ವಿರೋಧಿಸಿ ಮಂಗಳೂರು ನಗರ ದಕ್ಷಿಣ ಬಿಜೆಪಿ ಸಮಿತಿ ವತಿಯಿಂದ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಅವರು, ಐದು ವರ್ಷದಲ್ಲಿ ಸುಮಾರು 23ಕ್ಕೂ ಅಧಿಕ ಸಂಘಪರಿವಾರದ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ರಾಜ್ಯ ಸರಕಾರ ಹತ್ಯೆ ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡಿದೆ. ವಿವಿಧ ಸಂಘಟನೆಗಳ ಕಾರ್ಯಕರ್ತರ ಮೇಲಿನ ಸುಮಾರು 5 ಸಾವಿರ ಕೇಸ್ಗಳನ್ನು ವಾಪಾಸ್ ಪಡೆದಿದೆ. ಇದೇ ಹತ್ಯೆಗಳಿಗೆ ಕಾರಣವಾಗಿದ್ದು, ಪ್ರಕರಣವನ್ನು ಎನ್‌ಐಎಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ವೇದವ್ಯಾಸ ಕಾಮತ್, ಪಕ್ಷದ ಪ್ರಮುಖರಾದ ನಿತಿನ್ ಕುಮಾರ್, ಸಂದೀಪ್ ಶೆಟ್ಟಿ, ಸಂಜಯ್ ಪ್ರಭು, ನಂದನ್ ಮಲ್ಯ, ಭಾಸ್ಕರ ಚಂದ್ರ ಶೆಟ್ಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಮನಪಾ ಸದಯರಾದ ಜಯಂತಿ ಆಚಾರ್, ರೂಪಾ ಡಿ.ಬಂಗೇರ, ಪೂರ್ಣಿಮಾ, ಮೀರಾ ಕರ್ಕೇರ, ಯುವಮೋರ್ಚಾ ಪದಾಧಿಕಾರಿ ಗುರುಚರಣ್ ಹಾಗೂ ಮತ್ತಿತ್ತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Comments are closed.